ಬಾಲ್ಯವಿವಾಹದ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಸಲಹೆ
ಚಾಮರಾಜನಗರ

ಬಾಲ್ಯವಿವಾಹದ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಸಲಹೆ

March 3, 2020

ಚಾಮರಾಜನಗರ, ಮಾ.2- ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಸಿ.ಜೆ.ವಿಶಾಲಾಕ್ಷಿ ಸಲಹೆ ನೀಡಿದರು.

ನಗರದ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಡೆದ ಬಾಲ್ಯವಿವಾಹ ನಿಷೇಧ, ವಿಶ್ವ ಗ್ರಾಹಕರ ಹಕ್ಕುಗಳ ಕುರಿತ ಕಾನೂನು ಅರಿವು ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಕಲಿಯುವ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹ ಮಾಡುವುದರಿಂದ ಬಾಲ್ಯ ಜೀವನ ಕಳೆದುಕೊಳ್ಳುತ್ತಾರೆ. ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಮಾನಸಿಕ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಅಪ್ರಾಪ್ತರಿಗೆ ವಿವಾಹ ಮಾಡಿಸಿದವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು.

ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗು ವುದರಿಂದ ಮಕ್ಕಳು ವಿಕಲಚೇತನರಾಗಿ ಜನಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಮಾನ ಸಿಕ ಸ್ಥೈರ್ಯ ಕಳೆದುಕೊಳ್ಳುವುದಲ್ಲದೇ, ಶಿಕ್ಷಣದಿಂದ ವಂಚಿತರಾಗುತ್ತಾರೆ. ಮಕ್ಕಳ ಕನಸುಗಳು ಬೆಳೆಯುವ ಹಂತದಲ್ಲಿಯೇ ಕಮರಿಹೋಗುತ್ತದೆ. ಬಾಲ್ಯ ವಿವಾಹ ಪ್ರಕರಣಗಳ ಸುಳಿವು ಸಿಕ್ಕಲ್ಲಿ ವಿದ್ಯಾರ್ಥಿ ಗಳು ಶಿಕ್ಷಕರಿಗೆ ಮಾಹಿತಿ ನೀಡಬೇಕು ಎಂದರು. ಬಾಲ್ಯವಿವಾಹದಿಂದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಸಾಮರಸ್ಯವಿಲ್ಲದೇ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತದೆ. ಹೀಗಾಗಿ ಬಾಲ್ಯವಿವಾಹದಿಂದ ಎದುರಾ ಗುವ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿ ನಿಯರು ಜಾಗೃತರಾಗಬೇಕಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಹರವೆ ಮಾತನಾಡಿ ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು, ಪ್ರೀತಿ, ಪ್ರೇಮ, ವ್ಯಾಮೋಹಕ್ಕೆ ಒಳಗಾಗದೇ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು. ಬಾಲ್ಯವಿವಾಹದ ಪಿಡುಗು ಹೋಗಲಾಡಿ ಸಲು ಹಲವಾರು ಸಂಘಸಂಸ್ಥೆಗಳು ಸಹಕಾರ ನೀಡುತ್ತಿರುವುದರಿಂದ ಜನರಲ್ಲಿ ಅರಿವು ಮೂಡುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿ ಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಚಿಕ್ಕಬಸವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ದಲಿತ್‍ರಾಜು, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಉಮೇರಾ ಖಾನಂ, ಶಿವಮ್ಮ ಉಪಸ್ಥಿತರಿದ್ದರು.

Translate »