ಜಿಪಂ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ
ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಆದಷ್ಟು ಶೀಘ್ರವಾಗಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾದೇವರಾಜ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ತನ್ನ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಬೇಕು ಎಂದರು.
ಜಿಲ್ಲೆಯ ಅರಸೀಕೆರೆ, ಬೇಲೂರು, ಚನ್ನರಾಯ ಪಟ್ಟಣ ತಾಲೂಕುಗಳು ಸೇರಿದಂತೆ ಹಲವು ಗ್ರಾಮ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರೆ ದಿದೆ. ಹೊಸದಾಗಿ ಕೊಳವೆ ಬಾವಿಗಳ ಅನುಮೋ ದನೆಯಾಗಿದ್ದು, ಶೀಘ್ರವೇ ಕಾಮಗಾರಿ ಪೂರ್ಣ ಗೊಳಿಸಿ ಬದಲಿ ಜಲಮೂಲಗಳನ್ನು ಗುರುತಿಸಿ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಕೃಷಿ ತೋಟಗಾರಿಕಾ ಮತ್ತು ಪಶುಪಾಲನಾ ಇಲಾಖೆ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಬರ ನಿರ್ವಹಣೆಗೆ ವ್ಯವಸ್ಥಿತ ಕ್ರಮ ಕೈಗೊಳ್ಳಬೇಕು. ವಿಮೆ ಹಣ ಪಾವತಿಗೆ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಅಪೌಷ್ಟಿಕತೆ ನಿಯಂತ್ರಣಕ್ಕೆ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ, ಬಾಣಂತಿ ಯರಿಗೆ ಡಬ್ಬಿಗಳ ಮೂಲಕವೂ ಊಟ ಒದಗಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾ ರ್ಥಿಗಳು ಉತ್ತಮ ಫಲಿತಾಂಶ ಪಡೆಯುವಂತಾಗ ಬೇಕು. ಈ ಸಂಬಂಧ ಶಾಲೆಗಳಲ್ಲಿ ವಿಶೇಷ ತರಗತಿ ಗಳನ್ನು ನಡೆಸಬೇಕು. ಶಾಲೆಗಳ ದುರಸ್ತಿ ಕಾರ್ಯವನ್ನು ಶೀಘ್ರವೇ ಪೂರ್ಣಗೊಳಿಸಲು ಮುತುವರ್ಜಿ ವಹಿಸ ಬೇಕು ಎಂದು ಶಿಕ್ಷಣ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಪ್ರಕಾಶ್ ಮಾತನಾಡಿ, ಎಲ್ಲಾ ಇಲಾಖೆಗಳ ಅಧಿಕಾರಿ ಗಳು ರಚನಾತ್ಮಕವಾಗಿ ತೊಡಗಿಸಿಕೊಳ್ಳಬೇಕು. ಕೇವಲ ಆರ್ಥಿಕ ಗುರಿಯ ಜೊತೆಗೆ ಗುಣಾತ್ಮಕ ಬದಲಾವಣೆ ಬಗ್ಗೆಯೂ ಗಮನಹರಿಸಬೇಕು ಎಂದು ಹೇಳಿದರು.
ರೈತರು, ಮಹಿಳೆಯರು, ಗ್ರಾಮೀಣ ಜನಸಮು ದಾಯದಲ್ಲಿ ಸಾಮಥ್ರ್ಯಾಭಿವೃದ್ಧಿ ಚಟುವಟಿಕೆಗಳು ಹಾಗೂ ಜಾಗೃತಿ ಕಾರ್ಯಗಳು ನಡೆಯಬೇಕು. ಮುಂದಿನ ಸಭೆಗಳಲ್ಲಿ ಈ ವಿಷಯದ ಬಗ್ಗೆ ಹೆಚ್ಚಿನ ಗಮನಹರಿಸಲಾಗುವುದು. ಪ್ರಧಾನ ಮಂತ್ರಿ ಕೃಷಿಕ ಸನ್ಮಾನ್ ಯೋಜನೆ ಅನುಷ್ಠಾನ ತ್ವರಿತಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 100 ಮಂದಿ ಫಲಾನುಭವಿಗಳನ್ನು ಗುರುತಿಸಿ ದಾಖಲೆಗಳನ್ನು ಸಂಗ್ರಹಿಸಬೇಕು. ಕೃಷಿ ಹಾಗೂ ತೋಟಗಾರಿಕಾ ಇಲಾಖಾ ಅಧಿಕಾರಿಗಳು ಗ್ರಾಮ ಪಂಚಾಯಿತಿ ಪಿಡಿಓಗಳು ಪರಸ್ಪರ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನ ಸಂಪೂರ್ಣ ಸದ್ಬಳಕೆಯಾಗಬೇಕು. ಈ ಯೋಜನೆ ಗಳ ಅನುಷ್ಠಾನಕ್ಕೆ ವಿಶೇಷ ಆದ್ಯತೆ ನೀಡಬೇಕು. ಜಿಲ್ಲೆಯು ಬಹಿರ್ದೆಸೆ ಮುಕ್ತ ಎಂದು ಘೊಷಿಸಲಾ ಗಿದೆ. ಆದರೆ, ನಮ್ಮ ಜವಾಬ್ದಾರಿ ಮುಗಿದಿಲ್ಲ. ಇನ್ನೂ ಹಲವು ಕ್ರಮ ಕೈಗೊಳ್ಳಬೇಕಿದೆ. ‘ನಮ್ಮ ಗ್ರಾಮ, ಸ್ವಚ್ಛ ಗ್ರಾಮ’ ಯೋಜನೆಯಡಿ ಆರೋಗ್ಯ ಜಾಗೃತಿ, ಘನ ದ್ರವ್ಯ, ತ್ಯಾಜ್ಯ ವಿಲೇವಾರಿ ಬಗ್ಗೆ ಅರಿವು ಮೂಡಿಸಿ ಗ್ರಾಪಂಗಳು ರಾಷ್ಟ್ರಮಟ್ಟದಲ್ಲಿ ಮನ್ನಣೆ ಪುರಸ್ಕಾರ ಗಳನ್ನು ಪಡೆಯುವಂತಾಗಬೇಕು ಎಂದು ಹೇಳಿದರು.
ಪ್ರಚಾರ ಪತ್ರಗಳ ಬಿಡುಗಡೆ: ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ವಿಜಯ ಪ್ರಕಾಶ್ ಅವರು ‘ನಮ್ಮ ಗ್ರಾಮ – ಸ್ವಚ್ಛ ಗ್ರಾಮ’ ಯೋಜನೆಯ ಪ್ರಚಾರ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿ ಕಾರಿ ಪರಪ್ಪಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿ ವಾಸ್‍ಗೌಡ, ಉಪ ಕಾರ್ಯದರ್ಶಿ ನಾಗರಾಜ್, ಯೋಜನಾ ನಿರ್ದೇಶಕ ಅರುಣ್‍ಕುಮಾರ್ ಹಾಜರಿದ್ದರು.
ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ತೊಂದರೆಯಾಗಬಾರದು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಮೀಕ್ಷೆ ನಡೆಸಿ ಅಗತ್ಯವಿರುವೆಡೆ ಗೋಶಾಲೆ ತೆರೆಯಲು ಪೂರ್ವ ಸಿದ್ಧತೆ ನಡೆಸಬೇಕು. ಬೇಸಿಗೆಯಲ್ಲಿ ಎದುರಾಗಬಹುದಾದ ಆರೋಗ್ಯ ಸಮಸ್ಯೆಗಳ ಕುರಿತು ಮುಂಜಾಗ್ರತೆ ವಹಿಸಿ ಸಾಂಕ್ರಾ ಮಿಕ ಕಾಯಿಲೆ ಬಗ್ಗೆ ಜಾಗೃತಿ ವಹಿಸಬೇಕು
-ಶ್ವೇತಾ ದೇವರಾಜ್, ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ
ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕೆ ಕ್ರಮ
ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ನಿಯಂತ್ರಣದಲ್ಲಿದೆ. ಎಲ್ಲಾ ಜಾಗೃತಿ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ನಿಗಾವಹಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾಹಿತಿ ನೀಡಿದರು. ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 600 ಉಣ್ಣೆಗಳನ್ನು (ಮಂಗ, ದನಕರುಗಳಲ್ಲಿ ಕಂಡು ಬರುವ ಹುಳು) ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 2 ಧನಾತ್ಮಕ(ಪಾಸಿಟಿವ್)ವಾಗಿದೆ ಎಂಬ ಮಾಹಿತಿಯಿದೆ. ಉಣ್ಣೆ ಕಡಿತ ನಿಯಂತ್ರಣ ತೈಲಗಳನ್ನು ಈಗಾಗಲೇ ಅರಣ್ಯ ವ್ಯಾಪ್ತಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ವಿತರಿಸಲಾಗುತ್ತಿದೆ ಎಂದರು.