ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತ್ಮವಿಶ್ವಾಸವಿರಲಿ: ವೈಶಾಲಿ
ಹಾಸನ

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತ್ಮವಿಶ್ವಾಸವಿರಲಿ: ವೈಶಾಲಿ

July 21, 2019

ಹಾಸನ,ಜು.20- ಯಾವುದೇ ಸ್ಪರ್ಧಾ ತ್ಮಕ ಪರೀಕ್ಷೆಗಳನ್ನು ಎದುರಿಸಲು ಪರೀಕ್ಷಾ ರ್ಥಿಯಲ್ಲಿ ಮುಖ್ಯವಾಗಿ ಆತ್ಮವಿಶ್ವಾಸ ವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು.

ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಬಿಜಿಎಸ್ ಸ್ಟಡಿ ಸೆಂಟರ್ ಸಂಯುಕ್ತಾ ಶ್ರಯದಲ್ಲಿ ಆಯೋಜಿಸಲಾಗಿದ್ದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಗಾರ ಹಮ್ಮಿ ಕೊಳ್ಳಲಾಗಿದೆ. ಯಾವುದೇ ವಿಷಯಗಳ ಕಲಿಕೆ, ಮನನ, ಸ್ಮರಣೆ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬಹುದು. ಸ್ವಇಚ್ಛೆಯಿಂದ ಅಧ್ಯಯನದಲ್ಲಿ ತೊಡಗುವ ಜತೆಗೇ ಆತ್ಮವಿಶ್ವಾಸ ಹೊಂದಿದಲ್ಲಿ ಉತ್ತಮ ಸಾಧನೆಗೆ ಅವಕಾಶವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಮಾತ ನಾಡಿ, ಸ್ಫರ್ಧಾತ್ಮಕ ಪ್ರಪಂಚದಲ್ಲಿ ವಿದ್ಯಾ ದಾನ ಪರಮಶ್ರೇಷ್ಠವಾದುದು. ಸಾಧನೆಯ ಶಿಖರವೇರಲು ಇದು ಮೈಲಿಗಲ್ಲು ಎಂದರು.

ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವ ಮೂಲಕ ವಿದ್ಯಾಸಂಪತ್ತನ್ನು ತಮ್ಮದಾಗಿಸಿಕೊಳ್ಳ ಬಹುದು. ಉತ್ತಮ ಜೀವನ ನಿರ್ವಹಣೆಗೆ ಶಿಕ್ಷಣ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಬದುಕಿನ ದಾರಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಪ ವಿಭಾಗಾಧಿಕಾರಿ ಹೆಚ್.ಎಲ್. ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ಒದಗಿಸುವ ಉದ್ದೇಶ ದಿಂದ ಈ ಕಾರ್ಯಕ್ರಮ ಆಯೋಜಿಸ ಲಾಗಿದೆ. ಪ್ರತಿಯೊಬ್ಬರೂ ಕಾರ್ಯಾ ಗಾರದ ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ದರ್ಜೆಯ ಅಧಿಕಾರಿಗಳಾಗಿ ಹೊರಹೊಮ್ಮಬೇಕು ಎಂದು ಹಾರೈಸಿದರು.

ಪ್ರಭಾರ ಎಸ್‍ಪಿ ನಂದಿನಿ, ಸಕಲೇಶ ಪುರ ಎಸಿ ಕವಿತಾ ರಾಜಾರಾಂ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು. ತರಬೇತುದಾರ ಕೌಶಿಕ್, ಶಿವರಾಜ್ ಹಾಗೂ ಸೋಮ ಶೇಖರ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತ, ವಾರ್ತಾ ಧಿಕಾರಿ ವಿನೋದ್, ಅಧಿಕಾರಿಗಳಾದ ಹರ್ಷ, ಜಿನೇಂದ್ರ, ವಿಜಯಲಕ್ಷ್ಮಿ, ಆದಿಚುಂಚನ ಗಿರಿ ಮಠದ ವ್ಯವಸ್ಥಾಪಕ ಚಂದ್ರಶೇಖರ್ ಮತ್ತಿತರರಿದ್ದರು.

Translate »