ಕೊರೊನಾ ಸೋಂಕಿತರಿಗೆ ಬೆಡ್ ಅಭಾವ ಆತಂಕ ವಿ.ಪೇಟೆ, ಸೋ.ಪೇಟೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ಧತೆ
ಕೊಡಗು

ಕೊರೊನಾ ಸೋಂಕಿತರಿಗೆ ಬೆಡ್ ಅಭಾವ ಆತಂಕ ವಿ.ಪೇಟೆ, ಸೋ.ಪೇಟೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ಧತೆ

April 25, 2021

ಕೋವಿಡ್-19 ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. 24 ಗಂಟೆಯ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕಿಗೆ ಪುಟ್ಟ ರಂಗನಾಥ್(08272-228396), ವಿರಾಜಪೇಟೆ ಮತ್ತು ಪೆÇನ್ನಂಪೇಟೆ ತಾಲ್ಲೂಕಿಗೆ ವನಜಾಕ್ಷಿ(08274-256328), ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಶಶಿಧರ(08276-284567) ಅವರುಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

ಮಡಿಕೇರಿ, ಏ.24- ಕೊಡಗು ಜಿಲ್ಲೆ ಯಲ್ಲಿ ಪ್ರತಿ ದಿನ ನಿರೀ ಕ್ಷೆಗೂ ಮೀರಿ ಕೊರೊನ ಸೋಂಕಿನ ಪ್ರಕ ರಣಗಳು ಪತ್ತೆಯಾ ಗುತ್ತಿದ್ದು ಸಾರ್ವ ಜನಿಕರಲ್ಲಿ ಆತಂಕ ಮತ್ತು ಜೀವ ಭಯ ಸೃಷ್ಟಿಸಿದೆ. ಈ ಕಾರಣದಿಂದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ. ಒಟ್ಟು 700 ಬೆಡ್‍ಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿಯೇ ಮೀಸಲಿಡ ಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ಡಾ. ಮೋಹನ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ದೊಡ್ಡ ಖಾಸಗಿ ಆಸ್ಪತ್ರೆಗಳಿಲ್ಲ ದಿರುವುದು ಕೂಡ ಒಂದು ಸಮಸ್ಯೆ ಯಾಗಿದೆ. ಹೀಗಾಗಿ ಮೆಡಿಕಲ್ ಕಾಲೇಜು ಮತ್ತು ವಿರಾಜಪೇಟೆಯ ಡೆಂಟಲ್ ಕಾಲೇಜಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆಗಾಗಿ ಬಳಕೆ ಮಾಡಿಕೊಳ್ಳಲು ಚಿಂತನೆ ನಡೆಸ ಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆಗಳಿದ್ದು, 36 ವೆಂಟಿಲೇಟರ್ ಹಾಗೂ ಐಸಿಯು ವ್ಯವಸ್ಥೆ ಇದೆ.

ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಾಂಡೀರ ಪವನ್ ಪೆಮ್ಮಯ್ಯ ಎಂಬವರು ಕೋವಿಡ್ ಆಸ್ಪತ್ರೆಯ ಒಳರೋಗಿಗಳ ಬವಣೆ ಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದು, ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಆಸ್ಪತ್ರೆಯ ಒಳಭಾಗದಲ್ಲಿ ಬೆಡ್‍ಗಳ ಮೇಲೆ 2-3 ಮಂದಿ ಮಲಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಅಲ್ಲಿನ ಶಂಕಿತ ಕೊರೊನಾ ಸೋಂಕಿತರು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯಾಧಿಕಾರಿ ಸ್ಪಷ್ಟೀಕರಣ: ಶುಕ್ರವಾರ ಕೋವಿಡ್ ಸೋಂಕಿತರೊಬ್ಬರು ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇದೆ ಎಂದು ವಿಡಿಯೋ ಮಾಡಿ ವೈರಲ್ ಮಾಡಿದ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಕೋವಿಡ್ ಪರೀಕ್ಷೆಗೆಂದು ಬಂದವರನ್ನು ಒಂದು ವಾರ್ಡ್‍ನಲ್ಲಿ ಕೂರಿಸಲಾಗುತ್ತದೆ. ಹೀಗೆ ಒಂದೊಂದು ಹಾಸಿಗೆ ಮೇಲೆ 2-3 ಮಂದಿ ಕುಳಿತಿದ್ದಾರೆಯೇ ಹೊರತು ಸೋಂಕಿತರು ಎಂದು ದೃಢಪಟ್ಟ ನಂತರ ಆಸ್ಪತ್ರೆಗೆ ದಾಖಲಾದವರಲ್ಲವೆಂದು ಸ್ಪಷ್ಟಪಡಿ ಸಿದ್ದಾರೆ. ಕೋವಿಡ್ ಪರೀಕ್ಷೆಗೆ ಬಂದವರನ್ನು ಒಂದು ಕಡೆ ಕೂರಿಸಲಾಗುತ್ತದೆ, ಸೋಂಕು ಪಾಸಿಟಿವ್ ಆಗಿದ್ದಲ್ಲಿ ಸೋಂಕಿತರಿಗೆ ಪ್ರತ್ಯೇಕ ವಾರ್ಡ್‍ನಲ್ಲಿ ಹಾಸಿಗೆ ನೀಡಲಾಗುತ್ತದೆ. ಸಣ್ಣಪುಟ್ಟ ನ್ಯೂನತೆಗಳು ಆಗಿದ್ದಲ್ಲಿ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುಸಜ್ಜಿತವಾದ 56 ಬೆಡ್ ಗಳ ತೀವ್ರ ನಿಗಾ ಘಟಕ ಕಾರ್ಯ ನಿರ್ವ ಹಿಸುತ್ತದೆ. ಇಲ್ಲಿ ಮಕ್ಕಳ ಮತ್ತು ನವಜಾತ ಶಿಶುಗಳಿಗೆ ವಿಶೇಷ ಸೌಲಭ್ಯವಿದೆ. ಕೋವಿಡ್ ರೋಗಿಗಳಿಗೆ ಡಯಾಲಿಸಿಸ್‍ಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 32 ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. 13 ಕೆ.ಎಲ್ ಆಮ್ಲಜನಕ ಘಟಕ ಸ್ಥಾಪಿಸಲಾಗಿದ್ದು ಅಕ್ಟೋಬರ್ 10 2020 ರಿಂದ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಒಂದು ಖಾಸಗಿ ಆಸ್ಪತ್ರೆಯನ್ನು ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಹಸ್ತಾಂತರ ಪಡೆದುಕೊಂಡಿದ್ದು ಸಾರ್ವಜನಿಕರಿಗೆ ನಾನ್ ಕೋವಿಡ್ ಸೇವೆಗಳನ್ನು ಒದಗಿಸಲಾಗುತ್ತದೆ.

700 ಹಾಸಿಗಳಿಗೆ ವ್ಯವಸ್ಥೆ: ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಈಗಿರುವ 3 ಸಿ.ಸಿ.ಸಿ(300 ಹಾಸಿಗೆಗಳ) ಜೊತೆಗೆ ಹೆಚ್ಚುವರಿಯಾಗಿ 3 ಸಿ.ಸಿ.ಸಿ(400 ಹಾಸಿಗೆಗಳ) ಒಟ್ಟು 700 ಹಾಸಿಗೆಗಳಿಗೆ ಹೆಚ್ಚಿಸಲು ಕ್ರಮವಹಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಪ್ರತಿ ದಿನ ಕೋವಿಡ್ ಪರೀಕ್ಷೆಯ ಗುರಿ ಹೆಚ್ಚಿಸಲಾಗಿದ್ದು, ಪ್ರತಿ ದಿನ 900 ಆರ್‍ಟಿಪಿಸಿಆರ್ ಮತ್ತು 100 ಆರ್‍ಎಟಿ ರಂತೆ ಪ್ರತಿ ದಿನ ಒಟ್ಟು 1000 ಪರೀಕ್ಷೆ ಮಾಡಲು ಗುರಿಯನ್ನು ನಿಗಧಿಪಡಿಸ ಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಒಟ್ಟು 9 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, ಗ್ರಾಮ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಆರೋಗ್ಯ ತಪಾಸಣಾ ತಂಡಕ್ಕೆ ಸಹಕರಿಸುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದೆ. ಆರೋಗ್ಯ ತಪಾಸಣಾ ತಂಡಕ್ಕೆ ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ ಗಳು ಹಾಗೂ ಬಾಡಿಗೆ ಆಧಾರದಲ್ಲಿ ವಾಹನ ಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಡಾ.ಮೋಹನ್ ಹೇಳಿದರು.

ಕೊಡಗು ಜಿಲ್ಲೆಯ ಕೊವೀಡ್-19 ಆಸ್ಪತ್ರೆಯ ಪರಿಸ್ಥಿತಿ ಕೇಳುವವರೆ ಇಲ್ಲ ಎಂಬಂತಾಗಿದ್ದು, ಒಂದೇ ಹಾಸಿಗೆಯಲ್ಲಿ ಮೂರು- ನಾಲ್ಕು ಜನರು ಮಲಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಎಂದು ಮುಂದೆ ಹೇಳಿಕೆ ನೀಡುತ್ತಿದ್ದು, ಸಂಶಯ ಮೂಡಿಸುತ್ತಿದೆ. ಈ ಹಿಂದೆ ಕೂಡ ಕೋವಿಡ್ ಆಸ್ಪತ್ರೆ ಬಗ್ಗೆ ಅಪಸ್ವರ ಕೇಳಿ ಬಂದಾಗ ಹಾಗೂ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯ ಕರ್ಮಕಾಂಡವನ್ನು ಬಯಲಿಗೆ ಎಳೆದಾಗ ಜಿಲ್ಲಾಡಳಿತ ಅಲ್ಲಿಗೆ ತೇಪೆ ಹಾಕಿ ಮುಚ್ಚಿ ಹಾಕಿತ್ತು. ಇದೀಗ ಮತ್ತೆ ಕೋವಿಡ್-19 ಆಸ್ಪತ್ರೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕ್ಷಿ ಸಮೇತ ವಿಡಿಯೋ ವೈರಲ್ ಆಗುತ್ತಿದ್ದು, ಇದಕ್ಕೆ ಜಿಲ್ಲಾಡಳಿತ ಹಾಗೂ ನಮ್ಮ ಜನಪ್ರತಿನಿಧಿಗಳು ಏನು ಹೇಳುತ್ತಾರೆ?

ಚಮ್ಮಟೀರ ಪ್ರವೀಣ್ ಉತ್ತಪ್ಪ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ

Translate »