ಮೈಸೂರು,ಮೇ 2(ಪಿಎಂ)- ಮೈಸೂರು ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾ ಕರ್ ಸೂಚನೆ ನೀಡಿದ್ದು, ಆ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಅವರ ಪತ್ರಕ್ಕೆ ಸ್ಪಂದಿಸಿದ್ದಾರೆ.
ಶನಿವಾರವಷ್ಟೇ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದ ಸಚಿವ ಎಸ್.ಟಿ.ಸೋಮ ಶೇಖರ್, ಮೈಸೂರು ಜಿಲ್ಲೆಯಲ್ಲಿ ಸ್ಥಳೀಯ ಮಟ್ಟದ, ಜಿಲ್ಲಾ ಮಟ್ಟದ, ರಾಜ್ಯಮಟ್ಟದ ಹಾಗೂ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲಿ ಮಾಧ್ಯಮ ಮಿತ್ರರು ಕಾರ್ಯನಿರ್ವಹಿಸುತ್ತಿ ದ್ದಾರೆ. ಇವರು 24×7 ಮಾದರಿ ಸಮಾಜದ ಮಧ್ಯೆ ಕಾರ್ಯನಿರ್ವಹಿಸಿ, ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲವು ಸಂಗತಿಗಳನ್ನು ಸರ್ಕಾರದ ಗಮನಕ್ಕೂ ತರುತ್ತಿದ್ದಾರೆ. ಇವರ ಸೇವೆ ಅವಿಸ್ಮರಣೀಯ. ಹೀಗಾಗಿ ಇವರನ್ನು ಫ್ರಂಟ್‍ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಯನ್ನು ತುರ್ತಾಗಿ ಆರಂಭಿಸ ಬೇಕು ಎಂದು ಮನವಿ ಮಾಡಿದ್ದರು. ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿದ ಸಚಿವ ಡಾ.ಸುಧಾಕರ್, ಪತ್ರಕರ್ತರು ನಿಜವಾಗಿಯೂ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳ ಸಹಿತ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದಾರೆ. ಇವರು ಆರೋಗ್ಯವಾಗಿ ಕಾರ್ಯನಿರ್ವಹಣೆ ಮಾಡಬೇಕಿದೆ. ಹೀಗಾಗಿ ಮೈಸೂರು ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.