ಪಿಯು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭ
ಮೈಸೂರು

ಪಿಯು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭ

August 12, 2021

ಮೈಸೂರು, ಆ. 11(ಆರ್‍ಕೆ)- ಈಗ ತಾನೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಮೈಸೂರಿನ ಪದವಿಪೂರ್ವ ಕಾಲೇಜು ಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ. ಪಿಯುಸಿಗೆ ಪ್ರವೇಶ ಅರ್ಜಿ ಪಡೆಯಲು ವಿದ್ಯಾರ್ಥಿಗಳು ಮತ್ತು ಪೋಷಕರು ಮೈಸೂರಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಉದ್ದುದ್ದ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಬಾರಿ ಅತೀ ಹೆಚ್ಚು ಮಂದಿ ಪರೀಕ್ಷೆಯಲ್ಲಿ ಪಾಸಾಗಿ ರುವುದರಿಂದ ಕಳೆದ ವರ್ಷಕ್ಕಿಂತ ಹೆಚ್ಚಿನ ಬೇಡಿಕೆ ಪಿಯು ಕಾಲೇಜು ಗಳಿಗೆ ಬಂದಿರುವುದರಿಂದ ಸೀಟು ಪಡೆಯಲು ವಿದ್ಯಾರ್ಥಿಗಳು, ಪೋಷಕರು ಪರದಾಡುತ್ತಿದ್ದಾರೆ.
ಮಹಾರಾಜ, ಮಹಾರಾಣಿ, ವಿಭಜಿತ ಮಹಾರಾಜ, ಮರಿಮಲ್ಲಪ್ಪ, ಸದ್ವಿದ್ಯಾ, ಡಿ.ಬನುಮಯ್ಯ, ಶಾರದಾ ವಿಲಾಸ, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ವಿದ್ಯಾವರ್ಧಕ ಸೇರಿದಂತೆ ಮೈಸೂರಿನ ಹಲವು ಪಿಯು ಕಾಲೇಜುಗಳಲ್ಲಿ ಪ್ರವೇಶ ಅರ್ಜಿಗಾಗಿ ಇಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಸಾಲುಗಟ್ಟಿ ನಿಂತಿದ್ದುದು ಕಂಡುಬಂದಿತು. ಅತ್ಯುನ್ನತ ಶ್ರೇಣಿಯಲ್ಲಿ ಅತೀ ಹೆಚ್ಚು ಮಂದಿ 10ನೇ ತರಗತಿಯಲ್ಲಿ ತೇರ್ಗಡೆಯಾಗಿರುವುದರಿಂದ ಪಿಯುಸಿ ಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಸೇರಲು ಅಧಿಕ ವಿದ್ಯಾರ್ಥಿಗಳು ಆಸಕ್ತಿ ತೋರು ತ್ತಿರುವ ಕಾರಣ ಸೀಟು ಪಡೆಯಲು ಒತ್ತಡ ಜಾಸ್ತಿಯಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲಾ ಕಾಲೇಜುಗಳ ಹೊರ ಭಾಗದಲ್ಲೇ ಟೇಬಲ್‍ಗಳನ್ನು ಹಾಕಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಅರ್ಜಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್‍ನಿಂದ ಕೈ ತೊಳೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಆನ್‍ಲೈನ್ ಪ್ರವೇಶ: ದ್ವಿತೀಯ ಪಿಯುಸಿ ಫಲಿತಾಂಶ ಬಂದು ಹಲವು ದಿನ ಕಳೆದರೂ ಸರ್ಕಾರಿ ಪದವಿ ಕಾಲೇಜುಗಳಿಗೆ ಸೇರಲು ಇನ್ನೂ ಅರ್ಜಿ ವಿತರಿಸುತ್ತಿಲ್ಲ. ಈ ಬಾರಿ ಪದವಿ ತರಗತಿಗಳಿಗೆ ಆನ್‍ಲೈನ್ ಮೂಲಕ ಪ್ರವೇಶ ಪದ್ಧತಿ ಜಾರಿಗೆ ತರಲಾಗಿದ್ದು, ಆನ್‍ಲೈನ್‍ನಲ್ಲೇ ಅರ್ಜಿ ಫಾರಂ ಡೌನ್‍ಲೋಡ್ ಮಾಡಿ ಭರ್ತಿ ಮಾಡಿ ಅಪ್‍ಲೋಡ್ ಮಾಡಿದರೆ ಸೀಟು ಹಂಚಿಕೆಯೂ ಆನ್‍ಲೈನ್‍ನಲ್ಲೇ ಆಗುತ್ತದೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ. ನಾಲ್ಕೈದು ದಿನದೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಬಿಡಲಿದ್ದು, ಈ ಬಗ್ಗೆ ಪ್ರಕಟಣೆ ಮಾಡಿ ಅಗತ್ಯ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Translate »