ಏ.೨೨ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ
ಮೈಸೂರು

ಏ.೨೨ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

April 20, 2022

ಯಾವುದೇ ಧರ್ಮಸೂಚಕ ವಸ್ತç ಬಳಕೆಗೆ ಅವಕಾಶವಿಲ್ಲ
ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಠಿಣ ಕ್ರಮ

ಬೆಂಗಳೂರು ಏ.೧೯ (ಕೆಎಂಶಿ)-ಹತ್ತನೇ ತರಗತಿ ಪರೀಕ್ಷೆಯಂತೆಯೇ ಇದೇ ೨೨ರಿಂದ ಮೇ ೧೮ರವರೆಗೆ ನಡೆಯುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಯಾವುದೇ ಧರ್ಮ ಸೂಚಕ ವಸ್ತç ಬಳಸಲು ಅವಕಾಶವಿಲ್ಲ. ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ವಶಕ್ಕೆ ಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ರಾಜ್ಯದ ಒಟ್ಟು ೧,೦೭೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ೬,೮೪,೨೫೫ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ.

ಅದರಲ್ಲಿ ೬,೦೦,೫೧೯ ರೆಗ್ಯುಲರ್ ವಿದ್ಯಾರ್ಥಿಗಳು, ೬೧,೮೦೮ ಪುನರಾವರ್ತಿತ ಹಾಗೂ ೨೧,೯೨೮ ಖಾಸಗಿ ಅಭ್ಯರ್ಥಿಗಳು ಇದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಂದೋ ಬಸ್ತ್ ಇರಲಿದೆ. ಪಿಯು ಪರೀಕ್ಷೆಗೆ ಸಂಬAಧಿಸಿದ ಎಲ್ಲ ಕಾರ್ಯಗಳು ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಲಿವೆ. ೨೪/೭ ಸಿಸಿಟಿವಿ ಕ್ಯಾಮರಾ ನಿಗಾ ಇರಲಿದೆ ಎಂಬ ಮಾಹಿತಿ ನೀಡಿದರು. ಪರೀಕ್ಷೆಗೂ ಸಮವಸ್ತç ನಿಯಮ ಅನ್ವಯ ವಾಗುತ್ತದೆ. ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಸಮವಸ್ತçದಿಂದ ವಿನಾಯಿತಿ ಇರುತ್ತದೆ. ಆದರೆ, ಸಾಮಾನ್ಯ ಧಿರಿಸಿನಲ್ಲಿ ಪರೀಕ್ಷೆಗೆ ಹಾಜರಾಗು ವವರು ಸರ್ಕಾರ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ನಿಗಾ ಇರಿಸಲು ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈ ಹಿಂದೆ ನಕಲು ಪ್ರಯತ್ನ ನಡೆದಿರುವ ಪರೀಕ್ಷಾ ಕೇಂದ್ರಗಳ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಕುರಿತು ಹಲವು ಸುತ್ತಿನ ಸಭೆಗಳು ನಡೆದಿವೆ ಎಂದರು. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಗಳಂದು ತಮ್ಮ ಹಾಲ್‌ಟಿಕೆಟ್ ತೋರಿಸಿ ಉಚಿತವಾಗಿ ಕೆಎಸ್ ಆರ್ಟಿಸಿ ಬಸ್‌ನಲ್ಲಿ ಪ್ರಯಾಣ ಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ ಎಂದರು.

Translate »