ಬೆಂಗಳೂರು: ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ವಿಳಂಬ ವಾಗಿದ್ದು, ಆ ಪ್ರಕ್ರಿಯೆಯನ್ನು ತಡಮಾಡದೇ ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇ ಶಿಸಿದ್ದರು. ಇದರ ಬೆನ್ನಿಗೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‍ಬುಕ್/ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಅಪ್ಡೇಟ್ ನೀಡಿದ್ದಾರೆ. ಇದರಂತೆ, ನ.5ರಿಂದ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದ್ದು, ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾ ಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಸಚಿವ ಸುರೇಶ್‍ಕುಮಾರ್ ತಿಳಿಸಿದ್ದು, ಶಿಕ್ಷಕರ ವರ್ಗಾವಣೆಗೆ ಸಂಬಂ ಧಿಸಿದ ವೇಳಾಪಟ್ಟಿಯನ್ನು ಇಲಾಖೆ ನಾಳೆ ಪ್ರಕಟಿಸಲಿದೆ ಎಂದರು.
