ಬಹಿರಂಗವಾಗಿ ಕ್ಷಮೆಯಾಚಿಸಿದ ಬಳ್ಳಾರಿ ಜಿಲ್ಲಾಧಿಕಾರಿ
ಮೈಸೂರು

ಬಹಿರಂಗವಾಗಿ ಕ್ಷಮೆಯಾಚಿಸಿದ ಬಳ್ಳಾರಿ ಜಿಲ್ಲಾಧಿಕಾರಿ

July 1, 2020

ಅಮಾನವೀಯ ರೀತಿಯಲ್ಲಿ ಶವ ಸಂಸ್ಕಾರ ಪ್ರಕರಣ
ಕೊರೊನಾದಿಂದ ಸಾವನ್ನಪ್ಪಿದವರ ನಿರ್ವಹಣೆಗೆ ಬೇರೆ ತಂಡ
ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯ ಸಂಸ್ಕಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಕುರಿತು ಇದೀಗ ಬಳ್ಳಾರಿ ಡಿಸಿ ಎಸ್.ಎಸ್.ನಕುಲ್ ಪ್ರತಿಕ್ರಿಯಿಸಿ ಬಹಿರಂಗವಾಗಿ ಕ್ಷಮೆಯಾಚಿಸಿ ದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿ ದ್ದಾರೆ. ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯ ವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣ ಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು. ಈ ವಿಡಿಯೋ ಕುರಿತು ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದು, ಎಡಿಸಿ ಪಿ.ಎಸ್.ಮಂಜುನಾಥ ನೇತೃತ್ವ ದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಬೇಸರ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ.

Translate »