ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಇಎಂಎಲ್ ಕಾರ್ಮಿಕರ ಪ್ರತಿಭಟನಾ ಸಭೆ

ಮೈಸೂರು: ವೇತನ ಪರಿಷ್ಕರಣೆ ಮಾಡಬೇಕು. ನಿವೃತ್ತರಿಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಕ್ಯಾಂಟೀನ್ ವ್ಯವಸ್ಥೆಯಲ್ಲಿರುವ ಲೋಪ ದೋಷ ಸರಿಪಡಿಸಬೇಕು. ನಿವೃತ್ತ ಕಾರ್ಮಿಕರಿಗೂ ಪೆನ್ಷನ್ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಇಎಂಎಲ್ ಕಾರ್ಮಿಕರು ಮೈಸೂರಿನ ಹೂಟಗಳ್ಳಿಯ ಬಿಇಎಂಲ್ ಕಾರ್ಖಾನೆ ದ್ವಾರದಲ್ಲಿ ಪ್ರತಿಭಟನಾ ಸಭೆ ನಡೆಸಿದರು. ಬೆಮೆಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಆಶ್ರಯ ದಲ್ಲಿ ಮೈಸೂರು, ಬೆಂಗಳೂರು, ಕೆಜಿಎಫ್, ಪಾಲಕ್ಕಾಡ್ ಗಳಿಂದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿ ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಖಾನೆಯ ಆಡಳಿತ ವರ್ಗಕ್ಕೆ ಒತ್ತಾಯಿಸಿದರು. ಬೆಮೆಲ್ ಕಾರ್ಮಿಕರ ಸಂಘದ ಅಧ್ಯಕ್ಷ ದೇವದಾಸ್, ಉಪಾಧ್ಯಕ್ಷ ಗೋವಿಂದರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾಗಶಯನ, ಹೆಚ್.ಪಿ. ಶಿವಪ್ಪ, ಚಾಂದ್‍ಸಿಂಗ್ ಇನ್ನಿತರರು ನೇತೃತ್ವ ವಹಿಸಿದ್ದರು.