ಬೆಂಗಳೂರು ಡಿಜೆ, ಕೆಜಿ ಹಳ್ಳಿ ಗಲಭೆ ಸಂಬಂಧ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ದೇವೇಗೌಡರ ಆಗ್ರಹ
ಮೈಸೂರು

ಬೆಂಗಳೂರು ಡಿಜೆ, ಕೆಜಿ ಹಳ್ಳಿ ಗಲಭೆ ಸಂಬಂಧ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ದೇವೇಗೌಡರ ಆಗ್ರಹ

August 18, 2020

ಬೆಂಗಳೂರು, ಆ. 17(ಕೆಎಂಶಿ)- ನಗ ರದ ಡಿ.ಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಕುರಿತು ಹೈಕೋರ್ಟ್‍ನ ಹಾಲಿ ನ್ಯಾಯಾ ಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆಗ್ರಹಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಶಾಸ ಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಗಳು ಮತ್ತು ಜಿಲ್ಲಾ ಮುಖಂಡರ ಜೊತೆ ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವಿಷಯ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನ ವಿರೋಧಿ ನೀತಿ ಕಾಯ್ದೆ ಗಳ ತಿದ್ದುಪಡಿ ವಿರುದ್ಧ ಜನ ಜಾಗೃತಿ ಹಾಗೂ ಪಕ್ಷದ ಸಂಘಟನೆಯ ಬಗ್ಗೆ ಸಂವಾದ ನಡೆಸುವ ಮುನ್ನ ಅವರು ಸುದ್ದಿ ಗಾರರೊಂದಿಗೆ ಮಾತನಾಡಿದರು.

ಡಿ.ಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಘಟನೆಗೆ ಕಾರಣ ಏನು? ಕಾಂಗ್ರೆಸ್ ಆಂತರಿಕ ವಿಚಾರ ದಿಂದ ಘಟನೆ ನಡೆದಿದ್ಯಾ ಎಂಬುದರ ಬಗ್ಗೆ ನಾನು ಹೆಚ್ಚಿಗೆ ಮಾತಾಡಲ್ಲ ಎಂದರು.

ಈ ಪ್ರಕರಣದಲ್ಲಿ 300 ಕ್ಕಿಂತ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಆದರೆ, ನಿರಪ ರಾಧಿಗಳಿಗೆ ತೊಂದರೆ ಆಗಬಾರದು. ಸರ್ಕಾರ ಈ ಬಗ್ಗೆ ಯೋಚನೆ ಮಾಡಬೇಕು. ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿ ಸಿದೆ. ಇದರಿಂದ ಸತ್ಯಾಂಶ ಹೊರಬರಲು ಸಾಧ್ಯವಾಗೊಲ್ಲ. ಈ ಹಿಂದೆ ನಡೆದ ಹಲವು ಘಟನೆಗಳ ತನಿಖೆ ಏನಾಗಿದೆ ಎಂದು ನನಗೆ ಗೊತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮಾಡಲು ಹೊರಟಿ ರುವ ಕೆಲವು ಕಾಯ್ದೆಗಳ ತಿದ್ದುಪಡಿ ವಿಚಾರ ದಲ್ಲಿ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಈ ವಿಚಾರದಲ್ಲಿ ನಾವು ನಮ್ಮ ಪಕ್ಷದ ನಾಯ ಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡು ತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗಳಿಗೆ ಮನವಿ ನೀಡು ತ್ತೇವೆ. ನಂತರ ಮುಖ್ಯಮಂತ್ರಿಗಳಿಗೂ ಮನವಿ ನೀಡುತ್ತೇವೆ ಎಂದರು.

ಭೂ ಸುಧಾರಣಾ ಕಾಯಿದೆ, ಎಪಿ ಎಂಸಿ ಕಾಯಿದೆ ಮತ್ತು ಕೈಗಾರಿಕಾ ಕಾಯಿದೆಗಳ ಸುಗ್ರೀವಾಜ್ಞೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿರುವ ಜೆಡಿಎಸ್ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ವಿಡಿಯೋ ಸಂವಾದದಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ಜೆಪಿನಗರದ ನಿವಾಸದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹಾಸನದಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ 30 ಜಿಲ್ಲೆಗಳಿಂದ ಜೆಡಿಎಸ್ ಮುಖಂಡರು ಭಾಗಿ ಯಾಗಿದ್ದರು. ಸಾಮಾಜಿಕ ಅಂತರ ಕಾಪಾಡಿಕೊಂಡು ಹೋರಾಟ ಮಾಡೋಣ ಎಂದ ಗೌಡರು, ಪ್ರತಿ ಜಿಲ್ಲೆಗಳಲ್ಲಿ ಕೂಡಾ ಮುಖಂಡರ ಜೊತೆ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಲಿ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡೋಣ ಎಂದು ಸಂವಾದದಲ್ಲಿ ತಿಳಿಸಿದರು.

Translate »