ಇಂದು ಐಎಎಸ್, ಕೆಎಎಸ್ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ
ಮೈಸೂರು

ಇಂದು ಐಎಎಸ್, ಕೆಎಎಸ್ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ

February 12, 2021

ಮೈಸೂರು,ಫೆ.11-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಯೋ ಜಿಸಿದ್ದ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಫೆ.12ರ ಶುಕ್ರವಾರ ಬೆಳಿಗ್ಗೆ 11ಕ್ಕೆ ಬೆಂಗಳೂರಿನಿಂದಲೇ ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಸಿ, ಮುಖ್ಯ ಭಾಷಣ ಮಾಡುವರು. ಕರ್ನಾಟಕ ರಾಜ್ಯ ಹಾಸನ ಮೂಲದ ನಾಗಲ್ಯಾಂಡ್ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎನ್.ರಾಜಶೇಖರ ಮತ್ತು ಐಎಎಸ್ ಅಧಿಕಾರಿ ಹಾಸನ ಜಿಪಂ ಸಿಇಓ ಡಿ.ಭಾರತಿ ಅತಿಥಿಗಳಾಗಿ ಆನ್‍ಲೈನ್‍ನಲ್ಲಿ ಭಾಗವಹಿಸುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಲಿಂಗರಾಜಗಾಂಧಿ ಉಪಸ್ಥಿತರಿರುವರು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

ಕುಲಪತಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್, ಕೆಎಎಸ್ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವು ನ.27ರಂದು ಪ್ರಾರಂಭವಾಗಿದ್ದು, ಈ ಶಿಬಿರದಲ್ಲಿ ನಿಷ್ಣಾತರಾದ ಐಎಎಸ್, ಕೆಎಎಸ್ ಅಧಿಕಾರಿಗಳು, ಪ್ರಾಧ್ಯಾಪಕರು ವಿವಿಧ ಕ್ಷೇತ್ರಗಳ ವಿಷಯ ತಜ್ಞರು ತರಬೇತಿ ನೀಡಿರುತ್ತಾರೆ. 1300ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸುತ್ತಿದ್ದಾರೆ.

Translate »