ಭಾರತ್ ಬಂದ್: ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಭಾರತ್ ಬಂದ್: ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

September 28, 2021

ಚಾಮರಾಜನಗರ, ಸೆ.27(ಎಸ್‍ಎಸ್)- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳಿಂದ ಸೋಮವಾರ ಕರೆ ನೀಡಿದ್ದ ಭಾರತ್ ಬಂದ್‍ಗೆ ಜಿಲ್ಲೆಯಾ ದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಸಂಘಟನೆಗಳ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ನಗರದ ದೊಡ್ಡ ಅಂಗಡಿ ಬೀದಿಯಲ್ಲಿ ಕೆಲವು ಅಂಗಡಿ-ಮುಂಗಟ್ಟುಗಳು ಮುಚ್ಚಿ ದ್ದರೆ, ಇನ್ನು ಕೆಲವು ತೆರೆದಿದ್ದವು. ಹೀಗಾಗಿ ಅಂಗಡಿ ಬೀದಿಯಲ್ಲಿ ಜನ ಸಂಚಾರ ವಿರಳ ವಾಗಿತ್ತು. ಅಂಗಡಿ ಬೀದಿ ಹೊರತುಪಡಿಸಿ ದರೆ, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ತೆರೆದಿ ದ್ದವು. ವಾಹನ ಸಂಚಾರ ಎಂದಿನಂತೆ ಇತ್ತು. ನಗರದ ಎಲ್ಲಾ ಹೋಟೆಲ್‍ಗಳು ತೆರೆದಿ ದ್ದವು. ಕೆಎಸ್‍ಆರ್‍ಟಿಸಿ, ಖಾಸಗಿ ಬಸ್, ಆಟೋ ಗಳು ಎಂದಿನಂತೆ ಸಂಚರಿಸಿದವು. ಶಾಲಾ- ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಟೈರ್‍ಗೆ ಬೆಂಕಿ ಹಚ್ಚಿ ರೈತರಿಂದ ಪ್ರತಿಭಟನೆ: ಬಂದ್ ಬೆಂಬಲಿಸಿ ರೈತ ಸಂಘಟನೆಗಳು ನಗರದ ಭುವನೇಶ್ವರಿ ವೃತ್ತದಲ್ಲಿ ಬೆಳ್ಳಂ ಬೆಳಗ್ಗೆ ಸಮಾವೇಶಗೊಂಡು ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ರೈತ ಸಂಘ, ಹಸಿರು ಸೇನೆ ಮತ್ತು ಕಬ್ಬು ಬೆಳೆಗಾರ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಗೆ ಎಸ್‍ಡಿಪಿಐ, ಬಿಎಸ್‍ಪಿ, ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಭುವನೇಶ್ವರಿ ವೃತ್ತ, ಸಾರಿಗೆ ಬಸ್ ನಿಲ್ದಾಣ, ಗುಂಡ್ಲುಪೇಟೆ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್‍ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ನಗರದ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಜೋಡಿ ರಸ್ತೆ ಸೇರಿದಂತೆ ಇನ್ನಿತರ ಕಡೆ ಗಳಲ್ಲಿ ಬೈಕ್ ರ್ಯಾಲಿ ನಡೆಸಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಹಿಂಪಡೆ ಯುವಂತೆ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾ ರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ಬಿಎಸ್‍ಪಿ ಜಿಲ್ಲಾಧ್ಯಕ್ಷ ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್, ಉಪಾಧ್ಯಕ್ಷ ಸಿ.ಎಸ್.ಸೈಯದ್ ಆರೀಫ್, ನಗರಸಭಾ ಸದಸ್ಯ ಎಂ.ಮಹೇಶ್, ಮುಖಂಡರಾದ ಪಟೇಲ್ ಶಿವಮೂರ್ತಿ, ನಿಜ ಧ್ವನಿ ಗೋವಿಂದರಾಜು, ಮಹೇಶ್, ಶಿವಸ್ವಾಮಿ, ಕೃಷ್ಣ, ಶಿವಸ್ವಾಮಿ, ಮಂಜು ಇತರರಿದ್ದರು.

ಕನ್ನಡಪರ ಸಂಘಟನೆಗಳ ಪ್ರತಿಭಟನೆ: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ಚಮಾಲ್ ಬೀದಿಯಲ್ಲಿರುವ ಬಿಎಸ್‍ಎನ್‍ಎಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬಿಎಸ್‍ಎನ್‍ಎಲ್ ಕಚೇರಿ ಮುಂಭಾಗ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಮುಖಂಡ ರಾದ ಪ್ರಶಾಂತ್, ನಿಜಧ್ವನಿ ಗೋವಿಂದ ರಾಜು, ರಾಜು, ಅರುಣ್ ಕುಮಾರ್‍ಗೌಡ, ತಾಂಡವಮೂರ್ತಿ, ವೀರಭದ್ರ, ಕಾರ್ತಿಕ್, ಲಿಂಗರಾಜು, ಸಿದ್ದೇಶ್ ಕುಮಾರ್, ಚಂದ್ರ ಕುಮಾರ್, ಅಭಿ, ಸೂರಿ ಇತರರಿದ್ದರು.

Translate »