ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಯಲ್ಲಿ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗ ಲಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಸಿಕ್ಕ ಅತಿ ದೊಡ್ಡ ಗೆಲುವು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಬಿಜೆಪಿ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಿದೆ, ರಾಜ್ಯಕ್ಕೆ ಸ್ಥಿರ ಸರ್ಕಾರ ನೀಡಲಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.