ಮೈಸೂರು: ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಮಳವಳ್ಳಿ ಬಳಿ ಬೆಂಡರವಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಬನ್ನೂರು-ಮಳವಳ್ಳಿ ರಸ್ತೆಯ ಬೆಂಡರವಾಡಿ ಗ್ರಾಮದ ಮರಯ್ಯ(60) ಸಾವನ್ನಪ್ಪಿದವರು. ತೀವ್ರವಾಗಿ ಗಾಯಗೊಂಡಿರುವ ಮರೀ ಗೌಡ ಎಂಬುವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮರಯ್ಯ ಮತ್ತು ಮರೀಗೌಡ ಅವರು ಗ್ರಾಮದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಜಾಜ್ ಸಿಟಿ-100 ಬೈಕ್‍ನಲ್ಲಿ ಬಂದ ರವಿ ಎಂಬ ಯುವಕ ಗುರುವಾರ ರಾತ್ರಿ 7 ಗಂಟೆ ವೇಳೆಯಲ್ಲಿ ಡಿಕ್ಕಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೆ.ಆರ್.ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮರಯ್ಯ ರಾತ್ರಿ 11 ಗಂಟೆ ವೇಳೆಗೆ ಕೊನೆಯುಸಿರೆಳೆದರು.
ಮರೀಗೌಡ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬನ್ನೂರು ಠಾಣೆ ಪೊಲೀಸರು, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಮರಣೋ ತ್ತರ ಪರೀಕ್ಷೆ ನಡೆಸಿದ ನಂತರ ಮರಯ್ಯ ದೇಹವನ್ನು ವಾರಸುದಾರರಿಗೆ ಒಪ್ಪಿಸಿದರು.