ಬೈಕ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
ಮಂಡ್ಯ

ಬೈಕ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

April 23, 2020

ಮಂಡ್ಯ, ಏ.22(ನಾಗಯ್ಯ)- ಬೈಕ್‍ವೊಂದು ಡಿಕ್ಕಿಯೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.

ಗ್ರಾಮದ ಮಲ್ಲಿಕಾರ್ಜುನಸ್ವಾಮಿ(61) ಮೃತ ವ್ಯಕ್ತಿಯಾಗಿದ್ದು, ಈತ ಇಂದು ಮುಂಜಾನೆ ಹಾಲು ತರಲು ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್‍ವೊಂದು ಡಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ತೀವ್ರ ಗಾಯಗೊಂಡು ಮಲ್ಲಿಕಾರ್ಜುನಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಬೈಕ್ ಸವಾರ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಹಲಗೂರು ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Translate »