ಕೆಟ್ಟು ನಿಂತ ಕಬ್ಬಿನ ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರ ಸಾವು
ಮಂಡ್ಯ

ಕೆಟ್ಟು ನಿಂತ ಕಬ್ಬಿನ ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರ ಸಾವು

December 10, 2019

ಪಾಂಡವಪುರ, ಡಿ.9- ರಸ್ತೆ ಬದಿ ಕೆಟ್ಟು ನಿಂತಿದ್ದ ಕಬ್ಬಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ನಿವಾಸಿ ಶಿವರುದ್ರಪ್ಪ(24), ಮಹೇಶ್(24) ಸಾವನ್ನಪ್ಪಿದವರು. ಕಾರ್ಯ ನಿಮಿತ್ತ ನಂಜನಗೂಡಿನಿಂದ ಪಾಂಡವಪುರಕ್ಕೆ ಆಗಮಿಸಿದ್ದ ಶಿವರುದ್ರಪ್ಪ ಹಾಗೂ ಮಹೇಶ್ ಕೆಲಸ ಮುಗಿಸಿ ಕೊಂಡು ಭಾನುವಾರ ರಾತ್ರಿ ನಂಜನಗೂಡಿಗೆ ವಾಪಸ್ಸಾಗುವ ವೇಳೆ ರಿಲಯನ್ಸ್ ಪೆಟ್ರೋಲ್ ಬಂಕ್ ಸಮೀಪ ಕೆಟ್ಟು ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್‍ನಲ್ಲಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಬೈಕ್ ಸವಾರ ಶಿವರುದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ ಮಹೇಶ್ ತೀವ್ರ ಗಾಯ ಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀ ಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾ ನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೇ ಮಹೇಶ್ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪಾಂಡವ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »