ಗೊರೂರು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಅರಕಲಗೂಡು ತಾಲೂಕು ಮರಡಿ ಗ್ರಾಮದ ನಿವಾಸಿ ಮಲ್ಲೇಶ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟವನಾಗಿದ್ದು, ಈತ ನ.7 ರಂದು ಕೂಲಿ ಕೆಲಸ ಮುಗಿಸಿ ಗೊರೂರಿನಲ್ಲಿ ಮನೆಗೆ ಸಾಮಾನುಗಳನ್ನು ಖರೀದಿಸಿ ವಾಪಸ್ಸಾಗಲು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಅರಕಲಗೂಡು-ಹಾಸನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ (ಕೆಎ13-ಕೆ 4343) ಈತನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಲ್ಲೇಶ್‍ನನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.