ನಿಂತಿದ್ದ ಕ್ರೇನ್‍ಗೆ ಬೈಕ್ ಡಿಕ್ಕಿ; ಸವಾರ ಸಾವು
ಕೊಡಗು

ನಿಂತಿದ್ದ ಕ್ರೇನ್‍ಗೆ ಬೈಕ್ ಡಿಕ್ಕಿ; ಸವಾರ ಸಾವು

September 16, 2018

ಸೋಮವಾರಪೇಟೆ:  ನಿಂತಿದ್ದ ಕ್ರೇನ್ ಒಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸವಾರ ಸಾವಿಗೀಡಾಗಿರುವ ಘಟನೆ ಪಟ್ಟಣದ ಆನೆಕೆರೆ ಸಮೀಪ ಸಂಭವಿಸಿದೆ. ತಾಕೇರಿ ಗ್ರಾಮದ ಕಾಫಿ ಬೆಳೆಗಾರ ಶಿವಕುಮಾರ್ ಮೃತಪಟ್ಟವರು. ಬುಧವಾರ ಮದ್ಯರಾತ್ರಿ ದುರ್ಘಟನೆ ಸಂಭವಿಸಿದೆ. ಮೃತರು ಪತ್ನಿ ಹಾಗು 6 ವರ್ಷದ ಪುತ್ರನನ್ನು ಅಗಲಿದ್ದಾರೆ. ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Translate »