ಬೈಕ್-ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ಚಾಮರಾಜನಗರ

ಬೈಕ್-ಲಾರಿ ಡಿಕ್ಕಿ: ಬೈಕ್ ಸವಾರ ಸಾವು

June 28, 2018

ಚಾಮರಾಜನಗರ:  ತಾಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬುಧವಾರ ಸಂಜೆ ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ನಂಜನಗೂಡು ತಾಲೂಕು ಹಲ್ಲರೆ ಗ್ರಾಮದ ಶಿವರಾಜು (27) ಎಂದು ಗುರುತಿಸಲಾಗಿದೆ.

ಕಾರ್ಯನಿಮಿತ್ತ ವೆಂಕಟಯ್ಯನ ಛತ್ರಕ್ಕೆ ತೆರಳಿದ್ದ ಶಿವರಾಜು ಚಾ.ನಗರದತ್ತ ಬರುತ್ತಿರುವಾಗ ಇವರ ಬೈಕ್‍ಗೆ ಲಾರಿ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಿವರಾಜು ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »