ಮಿನಿಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಮಂಡ್ಯ

ಮಿನಿಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

March 30, 2022

ಭಾರತೀನಗರ, ಮಾ.೨೯- ಮದ್ದೂರಿ ನಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸಮೀಪದ ಹುಣ್ಣನದೊಡ್ಡಿ ಗ್ರಾಮದ ಬಳಿ ನಡೆದಿದೆ.

ಕೊತ್ತಿಪುರ ಗ್ರಾಮದ ಸಚಿನ್ (೨೬) ಮೃತಪಟ್ಟ ಬೈಕ್ ಸವಾರ. ಮದ್ದೂರು ಸಮೀಪ ಸೋಮನಹಳ್ಳಿ ಕೈಗಾರಿಕಾ ಪ್ರದೇಶ ದಲ್ಲಿರುವ ಗಾರ್ಮೆಂಟ್ಸ್ನಿAದ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಹುಣ್ಣನದೊಡ್ಡಿ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಕಾರ್ಮಿಕ ರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ವರನ್ನು ಭಾರತೀ ನಗರದ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಈ ಬಗ್ಗೆ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »