ಅತ್ಯಾಚಾರಿಗಳಿಗೆ ಗಲ್ಲು ಲೋಕಸಭೆಯಲ್ಲಿ ಮಸೂದೆ ಅಂಗೀಕಾರ
ದೇಶ-ವಿದೇಶ

ಅತ್ಯಾಚಾರಿಗಳಿಗೆ ಗಲ್ಲು ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

July 31, 2018

ನವದೆಹಲಿ: 12 ವರ್ಷದೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಅಂಕಿತ ಹಾಕಿದ್ದರು. ಇದೇ ವೇಳೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾಯಿದೆಗೆ ಲೋಕಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇನ್ನು ಕಾಯಿದೆಯಲ್ಲಿ 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ. ಇದಲ್ಲದೆ 16 ವರ್ಷದೊಳಗಿನ ಯುವತಿಯ ಮೇಲೆ ಅತ್ಯಾಚಾರ ನಡೆಸುವವರಿಗೆ ಕಠಿಣ ಶಿಕ್ಷೆ ನೀಡುವುದರ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ.

ಅವುಗಳಲ್ಲಿ 16 ವರ್ಷದ ಒಳಗಿನ ಯುವತಿಯರ ಮೇಲೆ ಅತ್ಯಾಚಾರ ನಡೆಸಿದವರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡುವಂತಿಲ್ಲ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದವರಿಗೆ ಶಿಕ್ಷೆಯನ್ನು 7 ರಿಂದ 10 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಈ ಅಪರಾಧಗಳಿಗೆ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ಸಹ ನೀಡಬಹುದಾಗಿದೆ.

Translate »