ಇಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ಧಿ: ಉಪನ್ಯಾಸ
ಮೈಸೂರು

ಇಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ಧಿ: ಉಪನ್ಯಾಸ

June 22, 2019

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂ.22 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜಗನ್ಮೋ ಹನ ಅರಮನೆ ಸಭಾಂಗಣದಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಾಬ್ಧಿ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಎ.ರಾಮದಾಸ್, ಮೇಯರ್ ಪುಷ್ಪಲತಾ ಜಗನ್ನಾಥ್ ಉಪಸ್ಥಿತರಿರುವರು. ಹಿರಿಯ ವಿದ್ವಾಂಸ ಡಾ.ಎನ್.ಎಸ್.ತಾರಾನಾಥ್ ಜಯಚಾಮರಾಜೇಂದ್ರ ಒಡೆಯರ್ ಕುರಿತು ಉಪನ್ಯಾಸ ನೀಡುವರು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಧ್ಯಾಹ್ನ 2.30ಕ್ಕೆ `ಜಯಚಾಮರಾಜ ಒಡೆಯರ್ ಜೀವನ-ಸಾಧನೆ’ ಕುರಿತ ಗೋಷ್ಠಿ ಯಲ್ಲಿ ಜಯಚಾಮರಾಜ ಒಡೆಯರ್ ಬದುಕು’ ಕುರಿತು ಆರ್.ರಾಜಾಚಂದ್ರ, ಆಡಳಿತ ಮತ್ತು ಸಾಮಾಜಿಕ ನ್ಯಾಯ’ ಕುರಿತು ಪ್ರೊ.ಎನ್.ಚಿನ್ನಸ್ವಾಮಿ ಸೋಸಲೆ, `ಶಾಸ್ತ್ರೀಯ ಸಂಗೀತಕ್ಕೆ ನೀಡಿದ ಕೊಡುಗೆ’ ಬಗ್ಗೆ ವಿದ್ವಾನ್ ಡಾ.ಸಿ.ಎ.ಶ್ರೀಧರ ವಿಷಯ ಮಂಡಿಸು ವರು. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ವಿಶ್ರಾಂತ ನಿರ್ದೇಶಕ ಬಿ.ಎಸ್. ಶ್ರೀಧರರಾಜೇ ಅರಸು ಅಧ್ಯಕ್ಷತೆ ವಹಿಸುವರು ಎಂದರು. ಸಂಜೆ 4.30 ಗಂಟೆಗೆ ವಾರ್ತಾ ಇಲಾಖೆಯಿಂದ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ಸಂಜೆ 5ಕ್ಕೆ ಆರ್.ಎಸ್.ನಂದಕುಮಾರ್ ತಂಡದಿಂದ ಜಯಚಾಮರಾಜ ಒಡೆಯರ್ ಕೃತಿಗಳ ಗಾಯನವಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ಜಯಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಚಾಮರಾಜ ಒಡೆಯರ್ ಪ್ರತಿಮೆಗಳಿಗೆ ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಮಾಲಾರ್ಪಣೆ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ನಿಕಟಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ್, ಕೋಶಾಧ್ಯಕ್ಷ ರಾಜಶೇಖರ ಕದಂಬ ಉಪಸ್ಥಿತರಿದ್ದರು.

Translate »