ಡೈರಿ ನಿಮಗೆಲ್ಲಿಂದ ಬಂತು: ಕಾಂಗ್ರೆಸ್‍ಗೆ ಬಿಜೆಪಿ 10 ಪ್ರಶ್ನೆ
ಮೈಸೂರು

ಡೈರಿ ನಿಮಗೆಲ್ಲಿಂದ ಬಂತು: ಕಾಂಗ್ರೆಸ್‍ಗೆ ಬಿಜೆಪಿ 10 ಪ್ರಶ್ನೆ

March 24, 2019

ಬೆಂಗಳೂರು: ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ದಿಢೀರನೆ ಸದ್ದು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯ ಕರಿಗೆ ನೀಡಿದ್ದಾರೆ ಎನ್ನಲಾದ ಕಪ್ಪ ಕಾಣಿಕೆ ಡೈರಿ ಈಗ ಹೊಸ ತಿರುವು ಪಡೆದುಕೊಂಡಿದೆ.

ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ನಿನ್ನೆ ಯಡಿಯೂರಪ್ಪನವ ರಿಗೆ ಸೇರಿದ್ದು ಎನ್ನಲಾದ ಡೈರಿ ನಕಲಿ ಹಾಗೂ ಇದನ್ನು ತಿದ್ದುಪಡಿ ಮಾಡಲಾ ಗಿದೆ ಎಂದು ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್‍ಗೆ 10 ಪ್ರಶ್ನೆಗಳನ್ನು ಮುಂದಿಟ್ಟಿದೆ.

ಡೈರಿಯನ್ನು ಮುದ್ರಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳು ಕಥೆಯನ್ನು ಸೃಷ್ಟಿಸಿದೆ.ಪ್ರತಿ ಪುಟ ದಲ್ಲೂ ಯಡಿಯೂರಪ್ಪನವರ ಸಹಿಯನ್ನು ಬದಲಾವಣೆ ಮಾಡಲಾಗಿದೆ. ಯಡಿಯೂ ರಪ್ಪನವರಿಗೆ ಡೈರಿ ಬರೆದಿಡುವ ಅಭ್ಯಾಸ ವಿಲ್ಲ. ಇನ್ನು ಅವರು ಯಾವ ರೀತಿ ಸಹಿ ಹಾಕುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಿರುವ ಬಿಜೆಪಿ ಡೈರಿಯಲ್ಲಿರುವ ಸಹಿಗೂ, ಪ್ರಸ್ತುತ ಬಿಎಸ್‍ವೈನವರ ಸಹಿಗೂ ವ್ಯತ್ಯಾಸ ಗೊತ್ತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಡೈರಿ ನಿಮಗೆ ಸಿಕ್ಕಿದ್ದು ಯಾವಾಗ ಎಂದು ಪ್ರಶ್ನಿಸಿರುವ ರಾಜ್ಯ ಬಿಜೆಪಿ, ಯಾರು ಡೈರಿಯನ್ನು ತಂದುಕೊಟ್ಟರು, ಎಲ್ಲಿ ಕೊಟ್ಟರು, ಹಾಗಾದರೆ ಒರಿಜಿನಲ್ ಡೈರಿ ಎಲ್ಲಿ ಎಂದಿದ್ದಾರೆ. ಇದುವರೆಗೂ ಈ ಡೈರಿ ಆಧರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ, 2013ರ ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರದ್ದೆಂದು ಹೇಳ ಲಾದ ಡೈರಿಯು ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಅವರೇ ಉತ್ತರಿಸಬೇಕಾಗಿದೆ. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಮುಖಂಡರು ಈಗ ಯಾವುದೇ ದೂರು ನೀಡದೇ ಇರಲು ಕಾರಣವೇನು?

ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ಸಿನ ಯಾವ್ಯಾವ ನಾಯಕರಿಗೆ ಹಣ ಸಂದಾಯವಾಗಿದೆ ಎನ್ನುವುದು ನಮೂದಾಗಿತ್ತು. ಆಗ ಕಾಂಗ್ರೆಸ್ ಮುಖಂಡರು ಮುಜುಗರಕ್ಕೆ ಸಿಲುಕಿದ್ದಾಗಲೇ ಯಡಿಯೂರಪ್ಪ ಅವರ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ. ಬಿಜೆಪಿ ನಾಯಕರದ್ದೆನ್ನಲಾದ ಡೈರಿ ಪ್ರಕರಣವು ಜನಲೋಕಪಾಲ್ ತನಿಖೆ ನಡೆಸಲು ಯೋಗ್ಯವಾಗಿದೆ ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.ಆದರೆ ಆರೋಪ ಮಾಡಿದವರು ದೂರು ನೀಡಬೇಕೇ ಅಥವಾ ದೂರಿಗೊಳಗಾದವರೇ, ಡೈರಿ ಬರೆಯುವವರು ಯಾರೂ ಪ್ರತೀ ಪುಟಗಳಲ್ಲಿ ಸಹಿ ಮಾಡುವುದಿಲ್ಲ. ಒಂದು ವೇಳೆ ಡೈರಿ ಬರೆಯುವವರು ಯಾರಿಗೆ ಕೊಟ್ಟಿದ್ದೇವೆ ಎಂದು ಮಾತ್ರ ಬರೆಯುವುದಿಲ್ಲ. ಯಾರಿಂದ ಬಂದಿದೆ ಎನ್ನುವುದನ್ನೂ ಬರೆಯುತ್ತಾರೆ. ಆದರೆ ಕಾಂಗ್ರೆಸ್ ಪ್ರಕಟಿಸಿರುವ ಡೈರಿಯಲ್ಲಿ ಇದಾವುದೂ ಇಲ್ಲ. ಇಷ್ಟಕ್ಕೂ2010ರ ಪೂರ್ವದಲ್ಲಿ ಯಡ್ಯೂರಪ್ಪನವರು ತಮ್ಮ ಸಹಿಯನ್ನು ಸಂಖ್ಯಾಶಾಸ್ತ್ರದ ಪ್ರಕಾರ ಯಡ್ಯೂರಪ್ಪ ಎಂದು ಸಹಿ ಮಾಡುತ್ತಿದ್ದರು. ಇದನ್ನು ಗಮನಿಸಿದಾಗ ಭಾರತೀಯ ಜನತಾ ಪಾರ್ಟಿ ಮತ್ತು ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತರಲು, ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ರೂಪಿಸಿರುವ ಸಂಚು ಇದೆಂದು ಅರ್ಥವಾಗುತ್ತದೆ ಎಂದಿದೆ.

ಡೈರಿ ನಕಲಿ: ಐಟಿ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಕೇಂದ್ರ ನಾಯಕರುಗಳಿಗೆ ಹಣ ಸಂದಾಯ ಮಾಡಿದ್ದಾರೆ ಎಂಬ ಮಾಹಿತಿಯುಳ್ಳ ಡೈರಿ ನಕಲಿ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಸ್ಪಷ್ಟಪಡಿಸಿದೆ.

ನಿಯತಕಾಲಿಕೆ ಯೊಂದರಲ್ಲಿ ಪ್ರಕಟವಾಗಿದ್ದ ಡೈರಿ ವಿವರಗಳು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಡೈರಿ ವಿವಾದದ ಬಗ್ಗೆ ಕೇಂದ್ರ ನೇರ ತೆರಿಗೆ ಮಂಡಳಿ ಶುಕ್ರವಾರ ಸ್ಪಷ್ಟೀಕರಣ ನೀಡಿದ ಬೆನ್ನಲ್ಲೇ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ಕರ್ನಾಟಕ – ಗೋವಾ (ತನಿಖೆ) ವಿಭಾಗದ ಮಹಾ ನಿರ್ದೇಶಕ ಬಿ.ಆರ್. ಬಾಲಕೃಷ್ಣನ್ ಅವರು, ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಡೈರಿ ನಕಲಿ ಎಂಬ ತೀರ್ಮಾನಕ್ಕೆ ಆದಾಯ ತೆರಿಗೆ ಇಲಾಖೆ ಬಂದಿದೆ ಎಂದರು.

ಡೈರಿಯಲ್ಲಿದ್ದ ಯಡಿಯೂರಪ್ಪ ಅವರ ಕೈ ಬರಹವನ್ನು ಹೈದರಾ ಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಮೂಲ ದಾಖಲೆ ಗಳಿಲ್ಲದೇ ಇದು ಯಾರ ಕೈ ಬರಹ ಎನ್ನುವುದನ್ನು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ ವಾಪಸ್ ಕಳುಹಿಸಿದೆ. ಅಂತಿಮವಾಗಿ ಇದು ನಕಲಿ ಡೈರಿ ಎನ್ನುವ ತೀರ್ಮಾನಕ್ಕೆ ಆದಾಯ ತೆರಿಗೆ ಇಲಾಖೆ ಬಂದಿದೆ ಎಂದರು. ಇದು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡ ಡೈರಿಯಲ್ಲ. ಇದನ್ನು ನಕಲು ಮಾಡಲಾಗಿದ್ದು, ಇಂತಹ ದಾಖಲೆಗಳ ಮೂಲಕ ತಮ್ಮ ಎದುರಾಳಿಗಳ ಮೇಲೆ ತನಿಖೆ ನಡೆಸಲಿ ಎಂದು ಇಲಾಖೆ ಮೇಲೆ ಪ್ರಭಾವ ಬೀರುವ ಪ್ರಯತ್ನವೂ ಸಹ ಇದರ ಹಿಂದೆ ಅಡಗಿರಬಹುದು. ಆದರೆ ನಾವು ಇಂತಹ ಯತ್ನಗಳಿಗೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

Translate »