ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಘೋಷಣೆ
ಮಂಡ್ಯ

ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಘೋಷಣೆ

March 4, 2019

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ‘ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಬಿಎಸ್‍ವೈ
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಅಂತಿಮಗೊಳಿಸಿದ ಬಳಿಕವೇ ನಮ್ಮ ಅಭ್ಯರ್ಥಿಯನ್ನು ಪ್ರಕಟಿಸಲಾಗು ವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಭಾನುವಾರ `ಮೋದಿ ವಿಜಯ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿದ ಅವರು, ಸುಮಲತಾ ಸ್ಪರ್ಧೆ ವಿಚಾರವೇ ಇನ್ನೂ ಅಂತಿಮವಾಗಿಲ್ಲ. ಅವರು ಯಾವ ಪಕ್ಷದಲ್ಲಿ ನಿಲ್ಲುತ್ತಾರೆ? ಅಥವಾ ಪಕ್ಷೇತರರಾಗಿಯೇ ನಿಲ್ಲುತ್ತಾರಾ? ಎಂಬುದು ಸ್ಪಷ್ಟವಾಗಬೇಕಿದೆ. ಅದನ್ನು ನೋಡಿಕೊಂಡು ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಸುಮಲತಾ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಬಹಳ ಹಗುರವಾಗಿ ಮಾತನಾಡಿದ್ದಾರೆ. ಆ ಮೂಲಕ ಅವರು ದಿ.ಅಂಬರೀಶ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ಪ್ರಧಾನಿ ಯವರ ವಿರುದ್ಧ ಹಗುರವಾಗಿ ಮಾತನಾ ಡುತ್ತಿದ್ದಾರೆ. ಉಗ್ರರ ವಿಚಾರವಾಗಿ ಕಾಂಗ್ರೆಸ್ ನಾಯಕರು ಸಾಕ್ಷಿ ಕೇಳುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳೂ ಒಂದು ಸಮು ದಾಯವನ್ನು ಓಲೈಸುವಂತೆ ಮಾತನಾಡು ತ್ತಿದ್ದಾರೆ. ಅವರದ್ದು ಲಜ್ಜೆಗೆಟ್ಟ ನಡೆ ಎಂದು ಮಾಜಿ ಮುಖ್ಯಮಂತ್ರಿ ಗುಡುಗಿದÀರು.
ರಾಜ್ಯ ಸರ್ಕಾರದ ರೈತರ ಸಾಲ ಮನ್ನಾ ಭರವಸೆ ಹುಸಿಯಾಗಿದೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕೇಂದ್ರದ ಯೋಜನೆಗಳನ್ನು ಜನರಿಂದ ಮುಚ್ಚಿ ಡುವ ಕಾರ್ಯ ಮಾಡುತ್ತಿದೆ. ರಾಜ್ಯ ಸರ್ಕಾರ ಬರೀ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ಟೀಕಿಸಿದರು.

ಭರ್ಜರಿ ಸಂಕಲ್ಪ ಯಾತ್ರೆ: ಜೆಡಿಎಸ್ ಭದ್ರ ಕೋಟೆಯಲ್ಲಿ ನಡೆದ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಜರಾಗಿದ್ದರು. ಪ್ರಧಾನಿ ಮೋದಿ ಪರವಾಗಿ ಜೈಕಾರ ಹಾಕುತ್ತಾ ಸಂಭ್ರಮಿಸಿದರು. ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಡಾ.ಸಿದ್ದರಾಮಯ್ಯ, ಕೆ.ಆರ್. ಪೇಟೆ ಮಂಜುನಾಥ್, ಅರವಿಂದ್, ವಿಜಯ ಕುಮಾರ್, ನಾಗಮಂಗಲ ನರ ಸಿಂಹಮೂರ್ತಿ, ಅಶೋಕ್ ಕುಮಾರ್, ಸುರೇಶ್, ಪರಮಾನಂದ್ ಮತ್ತಿತರರಿದ್ದರು.

Translate »