ಮೈಸೂರು: ಚಾಮರಾಜ ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ವಿ.ಶ್ರೀನಿವಾಸ ಪ್ರಸಾದ್ ಗೆಲು ವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ, ಸ್ಥಳೀಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿ ನಲ್ಲಿ ಜೂ.11 ಮತ್ತು 12ರಂದು ಚಾಮರಾಜನಗರ ಹಾಗೂ ನಂಜನಗೂಡಿನಲ್ಲಿ ಸಮಾವೇಶ ಆಯೋ ಜಿಸಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಸಚಿವ ಎಂ.ಶಿವಣ್ಣ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜ ನಗರ ಲೋಕಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ. ಪಕ್ಷದ ಅಭ್ಯರ್ಥಿ ಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವರೂ ಹಾಗೂ ಹಿರಿಯ ಮುತ್ಸದ್ದಿಯೂ ಆಗಿರುವ ವಿ.ಶ್ರೀನಿವಾಸ್ ಪ್ರಸಾದ್ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೂ.11 ರಂದು ಬೆಳಿಗ್ಗೆ 11ಕ್ಕೆ ಚಾಮರಾಜನಗರದ ನಂದಿ ಭವನದಲ್ಲಿ ಕೃತಜ್ಞತಾ ಸಮಾವೇಶ ಆಯೋಜಿಸ ಲಾಗಿದೆ. ಕೊಳ್ಳೇಗಾಲ, ಹನೂರು, ಚಾಮರಾಜನಗರ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಸುರೇಶ್‍ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿ ದ್ದಾರೆ. ಚಾಮರಾಜನಗರದ ಬಿಜೆಪಿ ಜಿಲ್ಲಾಧ್ಯಕ್ಷ ಪೆÇ್ರ. ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಜೂ.12ರಂದು ಬೆಳಗ್ಗೆ 11ಕ್ಕೆ ನಂಜನಗೂಡಿನ ಶ್ರೀನಿವಾಸಕಲ್ಯಾಣ ಮಂಟಪದಲ್ಲಿ ಚಾಮರಾಜ ನಗರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದ ಮತದಾರ ರಿಗೆ ಕೃತಜ್ಞತಾ ಸಮಾರಂಭ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಚ್.ಡಿ.ಕೋಟೆ, ತಿ.ನರಸೀ ಪುರ, ವರುಣ ಮತ್ತು ನಂಜನಗೂಡು ಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಪಕ್ಷದ ಜಿಲ್ಲಾ, ತಾಲೂಕು ಸಮಿತಿಗಳ, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ, ವಿಧಾನಸಭಾ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳಿಗೆ, ಸ್ಥಳೀಯ ಸಂಸ್ಥೆಗಳ ಪಕ್ಷದ ಸದಸ್ಯರಿಗೆ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದರು.
ಕೇಂದ್ರದಲ್ಲಿ ಸಚಿವ ಸ್ಥಾನ ನೀಡದೆ ದಲಿತ ಸಮು ದಾಯಕ್ಕೆ ಅನ್ಯಾಯ ಮಾಡಲಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರವಾದುದಾಗಿದೆ. ರಾಜ್ಯದಲ್ಲಿ ರುವ 4 ಎಸ್‍ಸಿ, 3 ಎಸ್‍ಟಿ ಮೀಸಲು ಕ್ಷೇತ್ರದಲ್ಲೂ ಬಿಜೆಪಿ ಜಯ ಸಾಧಿಸಿದೆ. ರಾಜ್ಯಕ್ಕೆ 6 ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ. ಅದರಲ್ಲಿ 4 ಸಂಸದರಿಗೆ ಮಂತ್ರಿಗಿರಿ ಸಿಕ್ಕಿದೆ. ಮುಂದಿನ ಅವಧಿಯಲ್ಲಿ ದಲಿತ ರಿಗೆ 2 ಸ್ಥಾನ ಸಿಗುವ ವಿಶ್ವಾಸವಿದೆ. ಜತೆಗೆ, ದಲಿತ ರಿಗೂ ಸಚಿವಗಿರಿ ಕೊಡಬೇಕೆಂಬ ಒತ್ತಾಸೆ ನಮ್ಮ ದಾಗಿದೆ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.
ಸತತವಾಗಿ ಎರಡು ಬಾರಿ ಸಂಸದರಾಗಿ ಸೇವೆ ಸಲ್ಲಿಸಿ, ಉತ್ತಮ ಅಭಿವೃದ್ಧಿ ಕಾರ್ಯ ಮಾಡಿದ್ದ ಆರ್. ಧ್ರುವನಾರಾಯಣ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅವರ ಕೆಲಸ-ಕಾರ್ಯಗಳನ್ನು ಮುಂದು ವರಿಸಿಕೊಂಡು ಹೋಗಲಾಗುವುದು. ಇದರೊಂ ದಿಗೆ ಇನ್ನಷ್ಟು ಹೆಚ್ಚಿನ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಮಹದೇವಯ್ಯ, ಸುಬ್ಬಣ್ಣ, ಬೋರೇಗೌಡ, ಬಾಲಕೃಷ್ಣ ಉಪಸ್ಥಿತರಿದ್ದರು.