ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ
ಮೈಸೂರು

ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ

November 11, 2020

ಬೆಂಗಳೂರು, ನ.10-ರಾಜ್ಯದಲ್ಲಿ ಉಪ ಚುನಾವಣೆ ಜೊತೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದರೆ, ಜೆಡಿಎಸ್‍ನ ಎ.ಪಿ.ರಂಗನಾಥ್ 5,107 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಅವರ ಅಭಿಮಾನಿಗಳು, ಅಭಿನಂದಿಸಿ, ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ವಿಜಯಿ ಆಗಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಯಾರೂ ಗೆಲ್ಲದ ಕಾರಣ, ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಬಿಜೆಪಿಯ ಶಶಿಲ್ ನಮೋಶಿ ಗೆಲುವು ಸಾಧಿಸಿದ್ದಾರೆ. ಇನ್ನು ಆಗ್ನೇಯ ಪದವೀಧರ ಕ್ಷೇತ್ರ ಮತ ಎಣಿಕೆ ನಡೆ ದಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಮುನ್ನಡೆ ಸಾಧಿಸಿದ್ದಾರೆ.

Translate »