ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಒಳಏಟು ಮರುಕಳಿಸಬಾರದು
ಮೈಸೂರು

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಒಳಏಟು ಮರುಕಳಿಸಬಾರದು

May 16, 2022

ಮೈಸೂರು,ಮೇ ೧೫(ಪಿಎಂ)- ಇತ್ತೀಚಿಗೆ ಮೈಸೂರಿ ನಲ್ಲಿ ನಡೆದ ಪರಿಷತ್ ಚುನಾವಣೆಯನ್ನು ಹತ್ತಿರದಿಂದ ನೋಡಿದ್ದು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಯಲ್ಲಿ ಪಕ್ಷದ ಅಭ್ಯರ್ಥಿಗೆ ಯಾವುದೇ ಕಾರಣಕ್ಕೂ ಸ್ವಪಕ್ಷೀಯರ ಒಳಏಟು ಮರುಕಳಿಸಬಾರದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದರು.

ಮೈಸೂರಿನ ನಿತ್ಯೋತ್ಸವ ಕಲ್ಯಾಣ ಮಂಟಪದಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಸಂಬAಧ ಬಿಜೆಪಿ ವತಿಯಿಂದ ಭಾನು ವಾರ ಹಮ್ಮಿಕೊಂಡಿದ್ದ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯನ್ನು ಹತ್ತಿರದಿಂದ ನೋಡಿದ್ದೇನೆ. ಈ ಚುನಾವಣೆಯಲ್ಲಿ ಆದಂತೆ ಯಾವುದೇ ಕಾರಣಕ್ಕೂ ಈ ಬಾರಿ ಒಳಏಟು ಆಗಬಾರದು. ಕಳೆದ ೩೦ ವರ್ಷಗಳ ಪ್ರಾಮಾಣ ಕ ದುಡಿಮೆ ಪರಿಗಣ ಸಿ ಮೈ.ವಿ.ರವಿಶಂಕರ್‌ಗೆ ಪಕ್ಷ ಟಿಕೆಟ್ ನೀಡಿದೆ. ಅವರಿಗೆ ಎರಡನೇ ಬಾರಿಗೆ ಈ ಚುನಾವಣೆ ಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ಕಲ್ಪಿಸಿದೆ. ಕಳೆದ ಬಾರಿ ಕೇವಲ ಅಲ್ಪ ಮತಗಳ ಅಂತರದಲ್ಲಿ ಅವರು ಸೋತಿದ್ದು, ಈ ಬಾರಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಳೆದ ಬಾರಿಯಂತೆ ಒಳಏಟು ಮರುಕಳಿಸಬಾರದು. ಪಕ್ಷದಲ್ಲಿ ಇದ್ದುಕೊಂಡು ಪಕ್ಷಕ್ಕೆ ಮೋಸ ಮಾಡು ವುದನ್ನು ಸಹಿಸುವುದಿಲ್ಲ. ಪಕ್ಷ ಟಿಕೆಟ್ ನೀಡಿದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಪಕ್ಷದ ತೀರ್ಮಾನಕ್ಕೆ ಗೌರವ ಕೊಡಬೇಕು. ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅನುಮೋದನೆ ಗೊಂಡಿದೆ. ಆದರೆ ವಿಧಾನಪರಿಷತ್‌ನಲ್ಲಿ ನಮಗೆ ಬಹುಮತ ಇಲ್ಲದ ಕಾರಣ ಅಲ್ಲಿನ್ನೂ ಅಂಗೀಕಾರ ಸಾಧ್ಯವಾಗಿಲ್ಲ. ಹಾಗಾಗಿ ಪರಿಷತ್‌ನಲ್ಲಿ ನಮ್ಮ ಪಕ್ಷ ಬಹುಮತ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತö್ಯದ ಮತ ಬರುವಂತೆ ಮಾಡಬೇಕಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಪದವೀಧರರನ್ನು ನೋಂದಣ ಮಾಡಲಾಗಿದೆ. ೬ ತಿಂಗಳ ಸತತ ಪ್ರಯತ್ನದಿಂದ ೬೦ ಸಾವಿರ ಪದವೀಧರರನ್ನು ಮೈಸೂರು ಜಿಲ್ಲೆಯಲ್ಲಿ ನೋಂದಣ ಮಾಡಲಾಗಿದೆ. ಜೊತೆಗೆ ಈಗಾಗಲೇ ೩೦ ಸಾವಿರ ಪದವೀಧರನ್ನು ಭೇಟಿ ಮಾಡಿ ಅವರ ಮೊಬೈಲ್ ನಂಬರ್ ಸಂಗ್ರಹ ಮಾಡಲಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಯನ್ನು ಗೆಲ್ಲಿಸಲೇಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಎಲ್ಲಾ ಇಲಾಖೆ ಖಾಲಿ ಹುದ್ದೆ ಭರ್ತಿ: ಕೋವಿಡ್ ಹಿನ್ನೆಲೆಯಲ್ಲಿ ಎರಡು-ಮೂರು ವರ್ಷ ಯಾವುದೇ ನೇಮಕಾತಿಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗಲಿಲ್ಲ. ನಾಲ್ಕೆöÊದು ತಿಂಗಳಿAದ ಎಲ್ಲಾ ಸುಧಾರಣೆ ಕಂಡಿದ್ದು, ಎಲ್ಲಾ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಲು ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದಾರೆ. ಎಲ್ಲಾ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವಂತೆ ಎಲ್ಲಾ ಸಚಿವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಸಹಕಾರ ಕ್ಷೇತ್ರದಲ್ಲಿ ಸುಮಾರು ೫ ಸಾವಿರ ಉದ್ಯೋಗ ನೀಡಲು ಈಗಾಗಲೇ ಚಾಲನೆ ನಿಡಲಾಗಿದೆ ಎಂದು ವಿವರಿಸಿದರು.

ನಿರುದ್ಯೋಗಿ ಪದವೀಧರರಿಗೆ ಅನುಕೂಲವಾಗು ವಂತಹ ಐತಿಹಾಸಿಕ ತೀರ್ಮಾನವನ್ನು ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರರು ಗೆದ್ದು ಏನು ಮಾಡಲು ಸಾಧ್ಯ? ರವಿಶಂಕರ್ ಗೆದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅವರಿಗೆ ಸ್ಪಂದಿಸಲಿದೆ. ಇದನ್ನು ಪದವೀಧರರು ಮನವರಿಕೆ ಮಾಡಿಕೊಂಡು ಬೆಂಬಲ ನೀಡಬೇಕು. ಅನೇಕ ಮಂತ್ರಿಗಳು ರವಿಶಂಕರ್ ಪರ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇತ್ತೀಚಿಗೆ ಪರಿಷತ್‌ಗೆ ಲ್ಯಾಂಡ್ ಮಾಫಿಯಾದವರು ಪ್ರವೇಶ ಪಡೆಯುತ್ತಿದ್ದಾರೆ. ಮನುಷ್ಯನ ಅಂಗಾAಗ ಮಾರುವಂತಹವರು ಇಂದು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒಂದು ಸೈಟ್ ಅನ್ನು ನಾಲ್ಕೆöÊದು ಜನಕ್ಕೆ ಮಾರಾಟ ಮಾಡಿದವರು ಪರಿಷತ್‌ಗೆ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ದೂರಿದರು.

ಈ ವರ್ಷ ೩೩ ಲಕ್ಷ ರೈತರಿಗೆ ೨೪ ಸಾವಿರ ಕೋಟಿ ಸಾಲ ನೀಡಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ನಮ್ಮ ಸರ್ಕಾರ ೬,೩೫೦ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದೆ. ಹಿಂದಿದ್ದ ಸರ್ಕಾರ ರೈತರ ಸಾಲಮನ್ನಾ ಘೋಷಣೆ ಮಾಡಿದ್ದಷ್ಟೇ. ಆದರೆ ಮನ್ನಾ ಮಾಡಿದ್ದು ನಮ್ಮ ಸರ್ಕಾರ ಎಂದರು.

ಸAಸದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಪ್ರೀತಂಗೌಡ, ಎನ್.ಮಹೇಶ್, ಮಾಜಿ ಶಾಸಕರಾದ ಭಾರತಿಶಂಕರ್, ಪರಿಮಳಾ ನಾಗಪ್ಪ, ಅಭ್ಯರ್ಥಿ ಮೈ.ವಿ. ರವಿಶಂಕರ್, ಬಿಜೆಪಿ ಮುಖಂಡ ರಘು ಕೌಟಿಲ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರರು ಹಾಜರಿದ್ದರು.

 

Translate »