ಶಿಕ್ಷಣ ಇಲಾಖೆ ಕೇಸರೀಕರಣ ಮಾಡಲು ಬಿಜೆಪಿ ಹುನ್ನಾರ
ಮೈಸೂರು

ಶಿಕ್ಷಣ ಇಲಾಖೆ ಕೇಸರೀಕರಣ ಮಾಡಲು ಬಿಜೆಪಿ ಹುನ್ನಾರ

November 15, 2019

ಮೈಸೂರು, ನ.14(ಆರ್‍ಕೆಬಿ)- ಸಂವಿಧಾನ ದಿನದ ಅಂಗವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವ ರನ್ನು ಅವಮಾನಿಸಲಾಗಿದೆ. ಇದರ ಹಿಂದೆ ಸಂಘ ಪರಿವಾರದ ಕೈವಾಡವಿದೆ. ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣ ಮಾಡಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಚಾಮ ರಾಜನಗರದ ಮಾಜಿ ಸಂಸದ ಆರ್.ಧ್ರುವ ನಾರಾಯಣ ಇಂದಿಲ್ಲಿ ಆರೋಪಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಸಂವಿಧಾನ ದಿನದ ಅಂಗವಾಗಿ ಹೊರತಂದಿರುವ ಪುಸ್ತಕದಲ್ಲಿ ಡಾ.ಅಂಬೇಡ್ಕರ್ ಸಂವಿಧಾನ ರಚಿಸಿಲ್ಲ ಎಂದು ಪ್ರಕಟಿಸುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ. ಈಗಾಗಲೇ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಇಲಾಖೆಯ ಅಧಿಕಾರಿಗಳ ತಪ್ಪಿನಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ್ದರಾದರೂ, ಸಚಿವರ ಗಮ ನಕ್ಕೆ ಬರದೇ ಇಲಾಖೆಯ ಹಿರಿಯ ಅಧಿಕಾರಿ ಗಳು ಸುತ್ತೋಲೆ ಹೊರಡಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಈ ವಿಚಾರವನ್ನು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಒಳಗೊಂಡ ಸಮಿತಿಯಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರು ರಾಜೀನಾಮೆ ನೀಡಬೇಕು. ಅವರಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿ ದ್ದರೂ ಕೇಂದ್ರ ಸರ್ಕಾರದ ಕ್ರಮಗಳು ಸರಿ ಯಿಲ್ಲ. ಪ್ರಸ್ತುತ ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆಯಾಗಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ಇಳಿಕೆಯಾಗಿಲ್ಲ. ಅತೀ ಹೆಚ್ಚಿನ ತೆರಿಗೆ ಸಂಗ್ರಹಿಸುತ್ತಿದ್ದರೂ ದೇಶ ಅಭಿವೃದ್ಧಿ ಯಾಗುತ್ತಿಲ್ಲ. ಜಿಡಿಪಿ ನಿರಂತರ ಕುಸಿಯು ತ್ತಿದೆ. ನಾವು ಅಭಿವೃದ್ಧಿ ಮೂಲಕ ಮತ ಕೇಳುತ್ತೇವೆ. ಆದರೆ ಬಿಜೆಪಿಯವರು 370ನೇ ವಿಧಿ, ಅಯೋಧ್ಯೆ, ಪಾಕಿಸ್ತಾನಕ್ಕೆ ನೀರು ಬಿಡುವುದಿಲ್ಲ. ಹೀಗೆ ಕೆಲವು ಭಾವ ನಾತ್ಮಕ ವಿಚಾರಗಳ ಮೇಲೆ ಜನರ ಸೆಳೆ ಯಲು ಯತ್ನಿಸುತ್ತಿದೆ ಎಂದು ಟೀಕಿಸಿ ದರು. ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಕಾಗಲವಾಡಿ ಎಂ. ಶಿವಣ್ಣ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಪಕ್ಷದ ವಕ್ತಾರ ಹೆಚ್.ಎ.ವೆಂಕಟೇಶ್, ಮಾಜಿ ಶಾಸಕ ಎಸ್.ಬಾಲರಾಜ್ ಉಪಸ್ಥಿತರಿದ್ದರು.

Translate »