ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ  ನಾಯಕರ ವಿರುದ್ಧವೂ ಕ್ರಮಕ್ಕೆ ಡಿಕೆಶಿ ಆಗ್ರಹ
News

ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕರ ವಿರುದ್ಧವೂ ಕ್ರಮಕ್ಕೆ ಡಿಕೆಶಿ ಆಗ್ರಹ

January 19, 2022

ಬೆಂಗಳೂರು,ಜ.18(ಕೆಎಂಶಿ)-ಕೋವಿಡ್ ನಿಯಮ ಉಲ್ಲಂ ಘನೆ ಮಾಡಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯ ದರ್ಶಿಗಳಿಗೆ ಪತ್ರ ಬರೆದು, ಕೋವಿಡ್ ನಿಯಮಾವಳಿಗಳು ಎಲ್ಲರಿಗೂ ಅನ್ವಯ ವಾಗುತ್ತವೆ. ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ಮೊಕದ್ದಮೆ ಹೂಡುತ್ತೀರಿ. ಆದರೆ ಬಿಜೆಪಿಯ ಶಾಸಕರು ಮತ್ತು ಮುಖಂ ಡರು ನಿಯಮಾವಳಿಗಳನ್ನು ಮೀರಿ ಸಭೆ-ಸಮಾರಂಭ ಮಾಡಿ ದರೂ, ಅಂತಹವರ ಮೇಲೆ ಯಾವುದೇ ಕ್ರಮ ಕೈಗೊಂ ಡಿಲ್ಲ, ಇದು ತಾರತಮ್ಯವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯ ಕಾರ್ಯದರ್ಶಿಯವರಿಗೆ ಬರೆದ ಪತ್ರವನ್ನು ಮಾಧ್ಯಮ ಗಳ ಮುಂದೆ ಬಹಿರಂಗಪಡಿಸಿದ್ದಲ್ಲದೆ, ನಂತರ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆಯನ್ನು ಮತ್ತೆ ಮುಂದು ವರೆಸುವ ಸಂಬಂಧ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ನಗರಕ್ಕೆ ಹಿಂತಿರುಗಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮೇಕೆದಾಟು ಯೋಜನೆಯಿಂದ ರೈತರಿಗೆ ನೀರು ನೀಡುತ್ತೇವೆ ಎಂಬ ಹೇಳಿಕೆಯಿಂದ ನ್ಯಾಯಾಲಯದಲ್ಲಿ ಹಿನ್ನಡೆಯಾಗಲಿದೆ ಎಂಬ ಆರ್. ಅಶೋಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಆರ್. ಅಶೋಕ್ ಅವರಷ್ಟು ಅತೀ ಬುದ್ಧಿವಂತ ಅಲ್ಲ. ಅವರು ಸರ್ಕಾರದ ಪ್ರತಿನಿಧಿ. ನನಗೂ ರಾಜಕೀಯ, ಕಾನೂನು ಗೊತ್ತಿದೆ. ಮೇಕೆದಾಟು ಯೋಜನೆ ಕುಡಿಯುವ ನೀರಿನ ಯೋಜನೆ. ಕೋವಿಡ್‍ನಿಂದ ವಿಶ್ರಾಂತಿ ಪಡೆಯುತ್ತಿದ್ದ ಅವರು ಇನ್ನಷ್ಟು ದಿನ ವಿಶ್ರಾಂತಿ ಪಡೆಯಲಿ. ಕನಕಪುರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಒಂದು ಎಕರೆ ಜಮೀನಿಗೂ ಈ ನೀರು ಬಳಕೆಯಾಗುವುದಿಲ್ಲ. ಬೆಂಗ ಳೂರಿನ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ. ಕಾವೇರಿ ಜಲಾನಯನ ಪ್ರದೇಶದ ಆಣೆಕಟ್ಟಿನಲ್ಲಿ ನೀರು ತುಂಬಿದಾಗ, ತಮಿಳುನಾಡಿಗೆ ಅವರ ಪಾಲಿನ ನೀರು ಕೊಟ್ಟ ನಂತರ ಹಾಸನ, ತುಮಕೂರು, ಮಂಡ್ಯ, ಮೈಸೂರು, ಚಾಮ ರಾಜನಗರ ರೈತರಿಗೆ ಅನುಕೂಲ ಆಗುತ್ತದೆ. ರೈತರಿಗೆ ಅನೂ ಕೂಲವಾಗದೆ ಬ್ಯಾಲೆನ್ಸಿಂಗ್ ರಿಸರ್ವಾಯರ್ ಯೋಜನೆ ಮಾಡಲು ಸಾಧ್ಯವೇ?’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಮೇಕೆದಾಟು ವಿಚಾರದಲ್ಲಿ ಬಿಜೆಪಿಯ ಒಕ್ಕಲಿಗ ನಾಯಕರು ನಿಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ‘ಎಲ್ಲ ಒಕ್ಕಲಿಗ ನಾಯಕರ ಕೈಲಿ ನಮ್ಮ ವಿರುದ್ಧ ವಾಗ್ದಾಳಿ ನಡೆಸುವುದು ಬಿಜೆಪಿ ಯವರ ತಂತ್ರಗಾರಿಕೆ. ಅವರು ಬೇರೆ ನಾಯಕರಿಂದ ಮಾತ ನಾಡಿಸುವುದಿಲ್ಲ. ಮುಖ್ಯಮಂತ್ರಿಗಳು ಬೇಕಂತಲೇ ಮಾತಾಡು ತ್ತಿಲ್ಲ. ಅವರ ತಂತ್ರಗಾರಿಕೆ ಅವರು ಮಾಡಲಿ’ ಎಂದು ಉತ್ತರಿಸಿದರು.

Translate »