ರಾಜ್ಯದಲ್ಲಿ ಬಿಜೆಪಿ ಮೇಲುಗೈ
ಮೈಸೂರು

ರಾಜ್ಯದಲ್ಲಿ ಬಿಜೆಪಿ ಮೇಲುಗೈ

May 21, 2019

ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ವಿ.ಶ್ರೀನಿ ವಾಸ ಪ್ರಸಾದ್ ಗೆಲುವು ಸಾಧಿಸಲಿದ್ದಾರೆ. ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಗೆಲ್ಲಲಿದ್ದಾರೆ.

ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗೆಲುವು ಸಾಧಿಸಿ ದರೆ, ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆಲ್ಲಲಿದ್ದಾರೆ. ಕಾಂಗ್ರೆಸ್‍ನ ಬಿ.ಕೆ. ಹರಿಪ್ರಸಾದ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಪರಾಭವಗೊಳ್ಳಲಿ ದ್ದಾರೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗಲಿದ್ದಾರೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿ ಯಲ್ಲಿ ಪುನರಾಯ್ಕೆಯಾಗಲಿದ್ದು, ಕೋಲಾರದಲ್ಲಿ ಕಾಂಗ್ರೆಸ್‍ನ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಗೆಲುವು ಸಾಧಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಬಿ.ಎನ್. ಬಚ್ಚೇಗೌಡ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪರಾಭವಗೊಳ್ಳಲಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಬೆಂಗಳೂರು ಉತ್ತರದಲ್ಲಿ ಸಚಿವ ಕೃಷ್ಣಭೈರೇಗೌಡ ವಿರುದ್ಧ ಗೆಲುವು ಸಾಧಿಸ ಲಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಪುನರಾಯ್ಕೆಯಾಗಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಪುನರಾಯ್ಕೆಯಾಗಲಿದ್ದಾರೆ. ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯ ಹಾಲಿ ಸಂಸದ ಪಿ.ಸಿ.ಮೋಹನ್ ಪುನರಾಯ್ಕೆಯಾಗಲಿ ದ್ದಾರೆ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರು ಉತ್ತರ ಕನ್ನಡದಲ್ಲಿ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿ ಕರ್ ವಿರುದ್ಧ ಗೆಲುವು ಸಾಧಿಸಲಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪುನರಾಯ್ಕೆಯಾಗ ಲಿದ್ದು, ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಬಿ.ಎನ್. ಚಂದ್ರಪ್ಪ ಗೆಲುವು ಸಾಧಿಸಲಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ್‍ಕುಮಾರ್ ಕಟೀಲ್ ಗೆಲುವು ಸಾಧಿಸಿದರೆ, ಬಾಗಲ ಕೋಟೆಯಲ್ಲಿ ಕಾಂಗ್ರೆಸ್‍ನ ವೀಣಾ ಕಾಶಪ್ಪ ನವರ್ ಗೆಲುವು ಸಾಧಿಸಲಿದ್ದಾರೆ.

ಧಾರವಾಡದಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಷಿ ಅವರು ಕಾಂಗ್ರೆಸ್‍ನ ವಿನಯ್ ಕುಲಕರ್ಣಿ ವಿರುದ್ಧ ಗೆಲುವು ಸಾಧಿಸಲಿದ್ದು, ಕೊಪ್ಪಳದಲ್ಲಿ ಬಿಜೆಪಿಯ ಕರಡಿ ಸಂಗಣ್ಣ, ರಾಯಚೂರಿನಲ್ಲಿ ಬಿಜೆಪಿಯ ರಾಜಾ ಅಮರೇಶ್ ನಾಯಕ್, ಹಾವೇರಿಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ ದಾವಣಗೆರೆಯಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ ಗೆಲುವು ಸಾಧಿಸಲಿದ್ದಾರೆ.

ಬಳ್ಳಾರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‍ನ ವಿ.ಎಸ್. ಉಗ್ರಪ್ಪ ಅವರು ಈ ಚುನಾವಣೆಯಲ್ಲಿ ಬಿಜೆಪಿಯ ದೇವೇಂದ್ರಪ್ಪ ವಿರುದ್ಧ ಸೋಲನುಭವಿಸಲಿದ್ದಾರೆ. ಚಿಕ್ಕೋಡಿಯಲ್ಲಿ ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಗೆಲುವು ಸಾಧಿಸಲಿದ್ದಾರೆ ಎಂದು ಸಿ-ವೋಟರ್ ಸಮೀಕ್ಷೆ ತಿಳಿಸಿದೆ.

 

Translate »