ಮೈಸೂರಿನಲ್ಲಿ ಬಿಜೆಪಿ ಭರ್ಜರಿ ವಿಜಯ ಸಂಕಲ್ಪ ಯಾತ್ರೆ
ಮೈಸೂರು

ಮೈಸೂರಿನಲ್ಲಿ ಬಿಜೆಪಿ ಭರ್ಜರಿ ವಿಜಯ ಸಂಕಲ್ಪ ಯಾತ್ರೆ

March 6, 2023

ಮೈಸೂರು, ಮಾ.5(ಆರ್‍ಕೆ)-ಕರ್ನಾ ಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್., ಚಾಮುಂಡೇಶ್ವರಿ ಮತ್ತು ಚಾಮ ರಾಜ ಕ್ಷೇತ್ರಗಳಲ್ಲಿ ಇಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಭರ್ಜರಿಯಾಗಿ ನಡೆಯಿತು.

ಮೈಸೂರಿನ ಎನ್.ಆರ್. ಕ್ಷೇತ್ರದ ಗಾಯತ್ರಿ ಪುರಂನ ಹುಲಿಯಮ್ಮನ ದೇವಸ್ಥಾನದ ಬಳಿ ಬಿಜೆಪಿ ಮುಖಂಡ ಸುಬ್ರಹ್ಮಣಿ ಅವರು ಆಯೋಜಿಸಿದ್ದ ಪೌರಕಾರ್ಮಿಕರಿಗೆ ಉಪಾಹಾರ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಈ ಬಾರಿ ಬಿಜೆಪಿಯತ್ತ ಜನರ ಒಲವಿದೆ. ಸರ್ಕಾರದ ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿದೆ ಎಂದರು.

ನಂತರ ಬೆಂಗಳೂರು-ನೀಲಗಿರಿ ರಸ್ತೆಯ ಎಫ್‍ಟಿಎಸ್ ಸರ್ಕಲ್ ಬಳಿಯ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯ ವರೊಂದಿಗೆ ಮಾಲಾರ್ಪಣೆ ಮಾಡಿದ ಬಿಜೆಪಿ ಮುಖಂಡರು, ಶಿವಾಜಿ ರಸ್ತೆ, ಕೆಸರೆ ರಾಜೇಂದ್ರನಗರ ಮುಖ್ಯ ರಸ್ತೆಗೆ ತಲುಪಿದ ವಿಜಯ ಸಂಕಲ್ಪ ಯಾತ್ರೆಗೆ ಶನಿ ದೇವ ಸ್ಥಾನದ ಕಮಾನು ಸರ್ಕಲ್ ಬಳಿ ಬಂದು ಸೇರಿಕೊಂಡ ಸಂಸದರಾದ ಬಿ.ವೈ.ರಾಘ ವೇಂದ್ರ ಹಾಗೂ ಪ್ರತಾಪ್ ಸಿಂಹ ಅವರು, ಬಿಜೆಪಿ ಎನ್.ಆರ್. ಕ್ಷೇತ್ರದ ಕಚೇರಿಯನ್ನು ಉದ್ಘಾಟಿಸಿದರು. ಈ ವೇಳೆ ವಂದನಾ ರ್ಪಣೆ ಮಾಡಿದ ಮಾಜಿ ಮೇಯರ್ ಸಂದೇಶ್‍ಸ್ವಾಮಿ, ಸಂಕಲ್ಪಯಾತ್ರೆ ಯಶಸ್ವಿ ಗೊಳಿಸಿದ ಸಂಸದರಾದ ಬಿ.ವೈ.ರಾಘ ವೇಂದ್ರ, ಪ್ರತಾಪ್‍ಸಿಂಹ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪಕ್ಷದ ನಗರಾಧ್ಯಕ್ಷ ಶ್ರೀವತ್ಸ ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸಿದರಲ್ಲದೆ, ಈ ಯಾತ್ರೆಯು ಎನ್.ಆರ್. ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿ ಸುವ ಮುನ್ಸೂಚನೆಯಾಗಿದೆ ಎಂದರು.

ನಂತರ ರಾಜೇಂದ್ರನಗರ ಬಸ್ ನಿಲ್ದಾಣ, ಕುರಿಮಂಡಿ, ಆರ್.ಎಸ್.ನಾಯ್ಡುನಗರ ಬಸ್ ನಿಲ್ದಾಣದ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ವಿಜಯ ಸಂಕಲ್ಪ ಯಾತ್ರೆಯು ಎನ್.ಆರ್.ಮೊಹಲ್ಲಾದ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿ, ನಾಯಕರು ಸರ್ಕಾರದ ಯೋಜನೆಗಳ ಬಗ್ಗೆ ಭಾಷಣ ಮಾಡಿದರು. ಮೆರವಣಿಗೆಯುದ್ದಕ್ಕೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದರಾದ ಬಿ.ವೈ.ರಾಘವೇಂದ್ರ, ಪ್ರತಾಪ್ ಸಿಂಹ ಅವರು ಭರ್ಜರಿ ರೋಡ್ ಶೋ ನಡೆಸಿ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಅನುಷ್ಠಾನಗೊಳಿಸಿರುವ ಬಗ್ಗೆ ಭಾಷಣ ಮಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಮೈಸೂರು ನಗರ ಅಧ್ಯಕ್ಷ ಶ್ರೀವತ್ಸ, ಮುಖಂಡರುಗಳಾದ ಸಂದೇಶ್ ಸ್ವಾಮಿ, ವಿ.ಗಿರಿರಾಜ್, ಬಿ.ಬಿ.ಮಂಜುನಾಥ್, ರಘು ಕೌಟಿಲ್ಯ, ಭಾನುಪ್ರಕಾಶ್, ಗಿರಿರಾಜ್ ಸೇರಿದಂತೆ ಹಲವು ಬಿಜೆಪಿ ನಾಯಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು.

ಮಧ್ಯಾಹ್ನ 12.40 ಗಂಟೆ ವೇಳೆಗೆ ಚಾಮುಂಡೇಶ್ವರಿ ಕ್ಷೇತ್ರ ತಲುಪಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು, ಹಿನಕಲ್ ಬಳಿ ನನ್ನೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರು, ನಂತರ ಹುಣಸೂರು ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಹಿನಕಲ್ ರಿಂಗ್ ರಸ್ತೆಯ ರಿಂಗ್ ರೋಡ್ ಜಂಕ್ಷನ್ ಬಳಿ ನೆರೆದಿದ್ದ ಜನಸ್ತೋಮ ಉದ್ಘಾಟಿಸಿ ಅವರು ಮಾತನಾಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಈ ಬಾರಿ ಉತ್ತಮ ವಾತಾವರಣವಿದೆ. ಕಳೆದ ಎರಡು ಬಾರಿ ನಮ್ಮ ಅಭ್ಯರ್ಥಿಗಳು ಸೋಲನನುಭವಿಸಿದ್ದರು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ದೇಶ ಮತ್ತು ರಾಜ್ಯಕ್ಕೆ ನೀಡಿದ ಜನಪರ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಇಂದು ಬಿಜೆಪಿಗೆ ಜನರ ಒಲವಿದೆ ಎಂಬುದು ವಿಜಯ ಸಂಕಲ್ಪ ಯಾತ್ರೆಗೆ ಸೇರಿರುವ ಜನರೇ ಸಾಕ್ಷಿ ಎಂದು ರಾಘವೇಂದ್ರ ನುಡಿದರು.

ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಆಶೀರ್ವಾದ ನೀಡಿ ಪೂರ್ಣ ಬೆಂಬಲದೊಂದಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಟ್ಟರೆ ರಾಜ್ಯವನ್ನು ಮಾದರಿ ಮಾಡಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಾಗುವುದು. ಗ್ರಾಮೀಣ ಜನರ ಬವಣೆಗಳಿಗೆ ಮಿಡಿಯುವ ಬಿಜೆಪಿ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಅನುವು ಮಾಡಿಕೊಡಬೇಕೆಂದು ಬಿ.ವೈ.ರಾಘವೇಂದ್ರ ಅವರು ಇದೇ ಸಂದರ್ಭ ನುಡಿದರು. ಇದೇ ವೇಳೆ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಚಾಮುಂಡೇಶ್ವರಿ ಕ್ಷೇತ್ರಗಳ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿ ಮತ್ತು ನಗರ ಸಭೆಗಳನ್ನಾಗಿ ಮಾಡಿ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸರ್ಕರ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿದೆ ಎಂದರು.

ಹಳೆ ಉಂಡವಾಡಿ ಕುಡಿಯುವ ನೀರಿನ ಯೋಜನೆಗೆ ಅಗತ್ಯ ಅನುದಾನ ನೀಡಿದ ಬಿಜೆಪಿ ಸರ್ಕಾರ, ಚಾಮುಂಡೇಶ್ವರಿ ಕ್ಷೇತ್ರದ ಹಲವು ಗ್ರಾಮಗಳಿಗೆ ಕಾವೇರಿ ನೀರು ಪೂರೈಸಲು ಮುಂದಾಗಿದ್ದು, ಈ ಯೋಜನೆಯಿಂದ ಗ್ರಾಮೀನ ಪ್ರದೇಶವಲ್ಲದೆ, ಮೈಸೂರು ನಗರಕ್ಕೆ ಮುಂದಿನ 50 ವರ್ಷ ಅವಧಿಗೆ ಕುಡಿಯುವ ನೀರಿನ ಕೊರತೆಯುಂಟಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.

ಅಷ್ಟೇ ಅಲ್ಲದೆ, ಕಬಿನಿಯಿಂದಲೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಕೈಗೊಳ್ಳಲಾಗಿದ್ದು, ನಮ್ಮ ಸರ್ಕಾರದಲ್ಲಿ ಜನರ ಕಲ್ಯಾಣ ಯೋಜನೆಗಳನ್ನು ಸಮರ್ಪಕ ವಾಗಿ ಅನುಷ್ಠಾನಗೊಳಿಸಲಾಗಿದೆಯಾದ್ದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜನರಿಗೆ ನೀಡಿವೆ ಎಂದು ಪ್ರತಾಪ್ ಸಿಂಹ ನುಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ನಗರಾಧ್ಯಕ್ಷ ಶ್ರೀವತ್ಸ, ಮುಖಂಡರಾದ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಅಧ್ಯಕ್ಷ ಎನ್.ಅರುಣ್ ಕುಮಾರ್‍ಗೌಡ, ಶಿವಕುಮಾರ್ ಸೇರಿದಂತೆ ಹಲವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Translate »