ನಾಳೆ ಮೈಸೂರಲ್ಲಿ ಬಿಜೆಪಿ ಜನಸ್ವರಾಜ್ ಯಾತ್ರೆ
ಮೈಸೂರು

ನಾಳೆ ಮೈಸೂರಲ್ಲಿ ಬಿಜೆಪಿ ಜನಸ್ವರಾಜ್ ಯಾತ್ರೆ

November 19, 2021

ಮೈಸೂರು, ನ.18(ಪಿಎಂ)- ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ರಾಜ್ಯದಲ್ಲಿ ಆರಂಭವಾಗಿರುವ ಜನಸ್ವರಾಜ್ ಯಾತ್ರೆಯು ನ.20ರಂದು ಮೈಸೂರಿ ನಲ್ಲಿ ನಡೆಯಲಿದೆ. ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸ್ಥಾನದ ಆಯ್ಕೆಗೂ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರದಲ್ಲಿ ಜನಸ್ವರಾಜ್ ಯಾತ್ರೆ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಮೈಸೂರಿನಲ್ಲಿ ಸಮಾವೇಶ ನಡೆಯಲಿದೆ.

ನಾಲ್ಕು ತಂಡಗಳಲ್ಲಿ ರಾಜ್ಯಾದ್ಯಂತ ಬಿಜೆಪಿ ಜನ ಸ್ವರಾಜ್ ಯಾತ್ರೆ ನಡೆಸಲಿದೆ. ಈ ಪೈಕಿ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡ ಮೈಸೂರು ಮತ್ತು ಚಾಮ ರಾಜನಗರ ಸೇರಿದಂತೆ ವಿವಿಧೆಡೆ ಜನಸ್ವರಾಜ್ ಯಾತ್ರೆ ನಡೆಸಲಿದೆ. ಮೈಸೂರಿನಲ್ಲಿ ನಡೆಯುವ ಜನಸ್ವರಾಜ್ ಯಾತ್ರೆ ಸಂಬಂಧ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ನ.20ರಂದು ಮಧ್ಯಾಹ್ನ 3ಕ್ಕೆ ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿ ಕಾರದ ಪಿ.ಕಾಳಿಂಗರಾವ್ ಬಯಲು ಸಭಾಂಗಣ ದಲ್ಲಿ ಜನಸ್ವರಾಜ್ ಯಾತ್ರೆ ನಡೆಯಲಿದೆ ಎಂದರು.

ಜಿಲ್ಲೆಯ ಗ್ರಾಪಂ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಪಾಲಿಕೆ ಸದಸ್ಯರು ಸೇರಿ ದಂತೆ ಸ್ಥಳೀಯ ಸಂಸ್ಥೆಯ ಸದಸ್ಯರು ಭಾಗವಹಿಸಲಿ ದ್ದಾರೆ. 2 ಸಾವಿರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸದಸ್ಯರು ಈ ಸಮಾವೇಶದಲ್ಲಿ (ಯಾತ್ರೆ) ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಲ್ಲದೆ, ಪಕ್ಷದ ಮುಖಂಡರು ಮತ್ತು ಕಾರ್ಯ ಕರ್ತರೂ ಭಾಗವಹಿಸಲಿದ್ದಾರೆ ಎಂದರು.

ಮೈಸೂರಿಗೆ ಆಗಮಿಸುವ ಕೆ.ಎಸ್.ಈಶ್ವರಪ್ಪ ನೇತೃ ತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾ ನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಹಾಲಪ್ಪ ಆಚಾರ್, ಎಸ್.ಅಂಗಾರ, ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಇದ್ದಾರೆ. ಮೈಸೂರು ಜಿಲ್ಲೆಯಲ್ಲಿ ಎರಡೂವರೆ ಸಾವಿರಕ್ಕೂ ಹೆಚ್ಚು ಮೊದಲ ಪ್ರಾಶಸ್ತ್ಯದ ಮತ ಬಿಜೆಪಿಗೆ ಬರಲಿದೆ ಎಂಬ ವಿಶ್ವಾಸ ವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪಕ್ಷದ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಸ್ಥಳೀಯ ಸಂಸ್ಥೆ ಸದಸ್ಯರಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ನಗರ ಸಹ ವಕ್ತಾರ ಕೇಬಲ್ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ದೇವನೂರು ಪ್ರತಾಪ್ ಗೋಷ್ಠಿಯಲ್ಲಿದ್ದರು.

Translate »