ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡನ್ನು  ಎತ್ತಿ ಕಟ್ಟುತ್ತಿರುವ ನಮ್ಮದೇ ರಾಜ್ಯದ ಬಿಜೆಪಿ ನಾಯಕರು
Uncategorized, ಮೈಸೂರು

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡನ್ನು ಎತ್ತಿ ಕಟ್ಟುತ್ತಿರುವ ನಮ್ಮದೇ ರಾಜ್ಯದ ಬಿಜೆಪಿ ನಾಯಕರು

January 4, 2022

ಮೈಸೂರು,ಜ.3(ಎಂಟಿವೈ)-ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸು ವುದಕ್ಕಾಗಿಯೇ ಸೀಮಿತಗೊಂಡಿರುವ ಮೇಕೆದಾಟು ಯೋಜನೆ ವಿರೋಧಿಸಲು ರಾಜ್ಯದ ಬಿಜೆಪಿ ನಾಯಕರು ತಮಿಳುನಾಡಿನ ಬಿಜೆಪಿ ನಾಯಕರನ್ನು ಎತ್ತಿಕಟ್ಟುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಅನುಷ್ಠಾನ ಗೊಂಡರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದೆ. ಅದರಲ್ಲೂ ವೇಗವಾಗಿ ಬೆಳೆಯುತ್ತಿರುವ ನಗರವಾಗಿರುವ ಬೆಂಗಳೂರಿನಲ್ಲಿ ಇಂದಿಗೂ ಶೇ.40ರಷ್ಟು ಮಂದಿಗೆ ಕಾವೇರಿ ನೀರು ಪೂರೈಸಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೇಕೆ ದಾಟು ಯೋಜನೆ ಅನುಷ್ಠಾನಗೊಳಿಸಿದರೆ ಮುಂದಿನ 50 ವರ್ಷದವರೆಗೂ ಕುಡಿ ಯುವ ನೀರಿಗೆ ಸಮಸ್ಯೆ ಇರುವುದಿಲ್ಲ. ಆದರೆ, ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯನ್ನು ವಿರೋ ಧಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಈ ಯೋಜನೆ ವಿರೋಧಿಸುತ್ತಿದ್ದಾರೆ. ಇದಕ್ಕೆ ತಮಿಳುನಾಡು ಬಿಜೆಪಿ ಉಸ್ತು ವಾರಿಯೂ ಆಗಿರುವ ಶಾಸಕ ಸಿ.ಟಿ.ರವಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದರ ಹಿಂದೆ ಯಾರ ಚಿತಾವಣೆ ಇದೆ? ಎನ್ನುವುದನ್ನು ಅರಿತುಕೊಳ್ಳಬೇಕು. ರಾಷ್ಟ್ರೀಯ ಜಲ ನ್ಯಾಯಾ ಧೀಕರಣ ಮತ್ತು ಸುಪ್ರೀಂ ಕೋರ್ಟ್‍ನಲ್ಲಿ ಈ ಯೋಜನೆಗೆ ತಡೆಯಾಜ್ಞೆ ನೀಡಿಲ್ಲ. ಅದಾಗ್ಯೂ ರಾಜಕೀಯ ಕಾರಣಕ್ಕೆ ತಮಿಳು ನಾಡು ಕ್ಯಾತೆ ತೆಗೆಯುತ್ತಿದೆ. ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಕೂಡ ಇದಕ್ಕೆ ಪರೋಕ್ಷವಾಗಿ ಬೆಂಬಲ ಸೂಚಿಸುತ್ತಿದೆ. ಇದನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ಯೋಜನೆ ಜಾರಿಗೆ ಏನೂ ಮಾಡಲಿಲ್ಲವೆಂದು ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿ ಕಾರ ಸಭೆಯಲ್ಲಿ ಪ್ರಸ್ತಾವವಾಗಿದ್ದ ಮೇಕೆ ದಾಟು ಯೋಜನೆಯ ವಿಷಯವನ್ನು 14 ಬಾರಿ ಮುಂದೂಡಲಾಗಿದೆ. ರಾಜ್ಯದ 25 ಬಿಜೆಪಿ ಸಂಸದರು ಇದ್ದರೂ ಏಕೆ ಈ ಯೋಜನೆ ಜಾರಿಗೆ ಅನುಮತಿ ಪಡೆಯಲು ವಿಳಂಬವಾಗುತ್ತಿದೆ? ಎಂದು ಪ್ರಶ್ನಿಸಿದರು.

ಪಾದಯಾತ್ರೆ ತಡೆಯಲು ಹುನ್ನಾರ: ಮೇಕೆ ದಾಟು-ಬೆಂಗಳೂರು ಪಾದಯಾತ್ರೆ ಜ.9ರಿಂದ 19ರವರೆಗೆ ನಡೆಯಲಿದೆ. ಇದಕ್ಕೆ ಸಿಗುತ್ತಿರುವ ಜನ ಬೆಂಬಲ ಕಂಡು ಬಿಜೆಪಿ ಸರ್ಕಾರ ಕೋವಿಡ್ ನೆಪ ಮುಂದಿಟ್ಟುಕೊಂಡು ಪಾದ ಯಾತ್ರೆ ತಡೆಯಲು ಪ್ರಯತ್ನ ನಡೆಸುತ್ತಿದೆ. ಏನೇ ಪ್ರಯತ್ನ ನಡೆಸಿದರೂ ನಮ್ಮ ಪಾದ ಯಾತ್ರೆ ತಡೆಯಲು ಆಗಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

ನಿಯಮ ಉಲ್ಲಂಘಿಸಿದ್ದು ಬಿಜೆಪಿ ನಾಯ ಕರೇ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಇನ್ನಿತರರು ಕೋವಿಡ್ ನಿಯಮ ವ್ಯಾಪಕವಾಗಿ ಉಲ್ಲಂ ಘಿಸಿದ್ದಾರೆ. ಇವರು ಮೊದಲು ನಿಯಮ ಗಳನ್ನು ಪಾಲನೆ ಮಾಡಲಿ ಎಂದು ಚಾಟಿ ಬೀಸಿದರು. ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಪಾದಯಾತ್ರೆ ಮಾಡು ತ್ತಿದ್ದು, ಬಿಜೆಪಿಯವರು ಏನನ್ನು ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಪಾದಯಾತ್ರೆ ಮುಂದುವರಿಸುತ್ತೇವೆ. ಈ ಹೋರಾಟ ವನ್ನೂ ಕಾಂಗ್ರೆಸ್ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎಂದರು.

Translate »