ಮೇ 23ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ
ಮೈಸೂರು

ಮೇ 23ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ

May 14, 2019

ಕಲಬುರಗಿ: ಬಿಜೆಪಿ ನಾಯ ಕರು ನಿರೀಕ್ಷಿಸಿದಂತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬದಲಾಗಿ ಬಿಜೆಪಿ ಶಾಸಕರೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೋಮವಾರ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಕಲಬುರಗಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಲಿದ್ದು, ಮೇ 23ರ ಬಳಿಕ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಯಿಲ್ಲ. ಮೈತ್ರಿ ಸರ್ಕಾರ ಐದು ವರ್ಷ ಅವಧಿ ಪೂರ್ಣಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ಮೈತ್ರಿ ನಾಯಕರು ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿ ದ್ದಾರೆ. ಮೇ 23ಕ್ಕೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಲಿದ್ದು, ಮೇ 23ರ ಬಳಿಕವೂ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ. ಆದರೆ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

Translate »