ಗ್ರಾಪಂ ಚುನಾವಣೆಯಲ್ಲಿ ಜಯಭೇರಿಗೆ ಬಿಜೆಪಿ ಸಿದ್ಧತೆ
ಮೈಸೂರು

ಗ್ರಾಪಂ ಚುನಾವಣೆಯಲ್ಲಿ ಜಯಭೇರಿಗೆ ಬಿಜೆಪಿ ಸಿದ್ಧತೆ

October 4, 2020

ಮೈಸೂರು, ಅ. 3(ಆರ್‍ಕೆ)- ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚೆಚ್ಚು ಅಭ್ಯರ್ಥಿ ಗಳನ್ನು ಗೆಲ್ಲಿಸಲು ಸರ್ವಪ್ರಯತ್ನ ಮಾಡಬೇಕೆಂದು ಮೈಸೂರು ನಗರ ಬಿಜೆಪಿ ಘಟಕದ ಪದಾಧಿಕಾರಿಗಳು ನಿರ್ಧರಿಸಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ವಿಕೆ ಫಂಕ್ಷನ್ ಹಾಲ್‍ನಲ್ಲಿ ಶನಿವಾರ ನಡೆದ ನಗರ ಬಿಜೆಪಿ ಪ್ರಥಮ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಾಲ್ಗೊಂ ಡಿದ್ದ ಬಹುತೇಕ ಪ್ರಮುಖರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಭ್ಯರ್ಥಿ ಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಮಾತನಾಡಿ, ಪಕ್ಷದ ಸಂಘ ಟನೆಯೊಂದಿಗೆ ಚುನಾವಣೆಗಳಲ್ಲೂ ಕಾರ್ಯಕರ್ತರು ಭಾಗವಹಿಸಿ, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವ ಮೂಲಕ ರಾಜ್ಯ ಸರ್ಕಾರದ ಬೆಂಬಲಕ್ಕೆ ಕೈ ಜೋಡಿಸ ಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳು ಹಾಗೂ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು. ಕೊರೊನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಿ ಮುನ್ನಡೆಯುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನೆಯನ್ನು ಸಲ್ಲಿ ಸುತ್ತೇನೆ. ಮುಂಬರುವ ಗ್ರಾಮ ಪಂಚಾಯ್ತಿ ಚುನಾ ವಣೆಯಲ್ಲಿ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷರ ಜೊತೆ ಕೈ ಜೋಡಿಸಿ ಗ್ರಾಮಾಂತರ ಭಾಗ ದಲ್ಲೂ ಪಕ್ಷವು ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಹಾಗೂ ಕೋವಿಡ್ ಮಾರ್ಗಸೂಚಿಯಂತೆ ಸರ್ಕಾರ ಜಾರಿಗೆ ತಂದಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿ ಸುವ ಬಗ್ಗೆಯೂ ಸಾರ್ವಜನಿಕರಿಗೆ ಜಾಗೃತಿ ಮೂಡಿ ಸುವ ಅವಶ್ಯಕತೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ವಿಭಾಗ ಪ್ರಭಾರಿ ಮೈ.ವಿ. ರವಿಶಂಕರ್, ಉಸ್ತುವಾರಿ ಗಳಾದ ಹಿರೇಂದ್ರ ಶಾ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮುಖಂಡರುಗಳಾದ ಸತೀಶ್‍ಚಂದ್ರ, ಬಿ.ಪಿ. ಮಂಜುನಾಥ್, ಅನಿಲ್ ಥಾಮಸ್, ಸುಬ್ಬಯ್ಯ, ಗೋಪಾಲರಾಜೇ ಅರಸ್, ಹೇಮಗಂಗಾ, ವಾಣೀಶ್ ಕುಮಾರ್, ಸೋಮಸುಂದರ್, ಗಿರಿದರ್ ಸೇರಿದಂತೆ ಹಲವು ಕಾರ್ಯಕರ್ತರು ಕಾರ್ಯಾಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದರು.

 

 

Translate »