ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಶೀಘ್ರವೇ ಗೃಹ ಸಚಿವ ಅಮಿತ್ ಷಾ, ಪ್ರಧಾನಿ ಮೋದಿ ಭೇಟಿ

ಬೆಂಗಳೂರು, ಮಾ. ೧೯(ಕೆಎಂಶಿ)- ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಒಂದು ವರ್ಷ ಇರುವಂತೆಯೇ ಬಿಜೆಪಿ ಸಿದ್ಧತೆ ನಡೆಸಿದೆ. ಇತ್ತೀಚೆಗೆ ಪಂಚರಾಜ್ಯ ಗಳಿಗೆ ನಡೆದ ವಿಧಾನಸಭಾ ಚುನಾ ವಣೆ ಯಶಸ್ವಿಯ ನಂತರ ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳ ಕಡೆ ಬಿಜೆಪಿ ವರಿಷ್ಠರು ಗಮನಹರಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ೧೧೪ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಏ.೧ರಂದು ಭಾಗ ವಹಿಸುವ ಮೂಲಕ ಪರೋಕ್ಷವಾಗಿ ಚುನಾ ವಣೆ ಸಿದ್ಧತೆಗೆ ಚಾಲನೆ ನೀಡುತ್ತಿದ್ದಾರೆ. ಇವರ ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ, ಒಂದು ದಿನದ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಪ್ರಧಾನಿಯವರು ಬಂದು ಹೋದ ನಂತರ ಕೇಂದ್ರದಲ್ಲಿ ಪ್ರಬಲ ಖಾತೆಗಳನ್ನು ಹೊಂದಿ ರುವ ಸಚಿವರು ರಾಜ್ಯದ ವಿವಿಧೆಡೆ ಕೇಂದ್ರ ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ರಾಜ್ಯ ವಿಧಾನಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದೆಂಬ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿ ರಾಷ್ಟಿçÃಯ ನಾಯಕರು ಪಕ್ಷ ಸಂಘಟನೆಗೆ ಮುಂದಾಗಿರುವುದಲ್ಲದೆ, ಚುನಾವಣಾ ರ‍್ಯಾಲಿ ಮತ್ತು ರೋಡ್ ಶೋ ನಡೆಸಲು ಕಾರ್ಯಕ್ರಮ ರೂಪಿಸಿದ್ದಾರೆ. ಗುಜರಾತ್ ರಾಜ್ಯ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ತಮ್ಮ ತವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ಗುಜರಾತ್‌ನಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡು ರೋಡ್‌ಶೋ ನಡೆಸಿದರು. ಇದಾದ ನಂತರ ಕರ್ನಾಟಕದ ಕಡೆಗೆ ಗಮನ ಹರಿಸಿರುವ ಪ್ರಧಾನಿಯವರು ಚುನಾವಣಾ ಸಿದ್ಧತೆಗೆ ಚಾಲನೆ ನೀಡುತ್ತಿದ್ದಾರೆ. ಪ್ರದೇಶ ಕಾಂಗ್ರೆಸ್ ಈಗಾಗಲೇ ಚುನಾವಣಾ ಸಿದ್ದತೆ ನಡೆಸಿ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದಕ್ಕೆ ಪ್ರತಿ ಹೋರಾಟ ನಡೆಸÀಲು ರಾಜ್ಯ ಬಿಜೆಪಿ ದೆಹಲಿ ವರಿಷ್ಠರನ್ನೇ ಬೀದಿಗಿಳಿಸುತ್ತಿದೆ.
ಮೇ ತಿಂಗಳಲ್ಲಿ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ನಡ್ಡಾ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡು, ಮುಖಂಡರ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನ್ನು ಚುನಾವಣೆ ಗಮನದಲ್ಲಿಟ್ಟುಕೊಂಡೇ ಮಂಡಿಸಿ, ಎಲ್ಲರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಇದೀಗ ಎರಡನೇ ಹಂತದಲ್ಲಿ ರಾಷ್ಟಿçÃಯ ನಾಯಕರು ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.