ಬೆಂಗಳೂರು, ಜು.18- ಸ್ಪೀಕರ್ ರಮೇಶ್ ಕುಮಾರ್ ವರ್ತನೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಬಿಜೆಪಿ ನಿರ್ಧರಿಸಿದೆ. ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣದ ಮಧ್ಯಂತರ ಆದೇಶ ಹೊರಬಿದ್ದಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ. ಈ ಪ್ರಕರಣದಲ್ಲೇ ಸ್ಪೀಕರ್ ವರ್ತನೆ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಬಿಜೆಪಿ ಸಿದ್ಧತೆ ನಡೆಸಿದೆ. ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರೇ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಕರ್ನಾಟಕದಲ್ಲಿ ಇದುವರೆವಿಗೂ 7 ವಿಶ್ವಾಸಮತ ಕಲಾಪಗಳು ನಡೆದಿದ್ದು, ಎಲ್ಲವೂ ಕೇವಲ ಒಂದೇ ದಿನದಲ್ಲಿ ಮುಕ್ತಾಯವಾಗಿದೆ. ಹೀಗಿರುವಾಗ ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಸ್ತಾಪಿಸಿರುವ ವಿಶ್ವಾಸಮತಯಾಚನೆ ಕಲಾಪವು ಅನಾವಶ್ಯಕವಾಗಿ ಕಾಲಹರಣ ಮಾಡುತ್ತಿದ್ದು, ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿ ಮಾಡಬೇಕೆಂದು ಸುಪ್ರೀಂಕೋರ್ಟ್‍ಗೆ ನಾಳೆ ಬಿಜೆಪಿ ಪರ ಅರ್ಜಿ ಸಲ್ಲಿಕೆಯಾಗಲಿದೆ ಎಂದು ಮೂಲಗಳು ಹೇಳಿದೆ.