ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ

November 10, 2018

ಮೈಸೂರು: ನಾಳೆ (ನ.10) ನಡೆಯಲಿ ರುವ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನೆ ನಡೆಸಿದರೆ, ಇದಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಧರಣಿ ನಡೆಸಿದರು.

ಪಕ್ಷದ ರಾಜ್ಯ ಘಟಕದ ಕರೆಯ ಮೇರೆಗೆ ನಗರ ಮತ್ತು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ನಡೆಸಲುದ್ದೇಶಿ ಸಿರುವ ಟಿಪ್ಪು ಸುಲ್ತಾನ್ ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಶಾಸಕ ಎಲ್.ನಾಗೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ನೇತೃತ್ವದಲ್ಲಿ ಮೈಸೂರಿನ ಗಾಂಧಿ ವೃತ್ತದಲ್ಲಿ ನೂರಾರು ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಜಯಂತಿ ಆಚರಣೆ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಘೋಷಣಾ ಫಲಕಗಳನ್ನು ಪ್ರದರ್ಶಿ ಸಿದ ಕಾರ್ಯ ಕರ್ತರು, ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು, ತಪ್ಪಿದಲ್ಲಿ ಶನಿವಾರ ನಡೆಯುವ ಅಹಿತಕರ ಘಟನೆಗಳಿಗೆ ಸರ್ಕಾರವೇ ನೇರ ಹೊಣೆ ಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭ ಮಾತನಾಡಿದ ಗೋ. ಮಧುಸೂದನ್, ಮೈಸೂರು ರಾಜವಂಶಸ್ಥರನ್ನು ಮೂಲೆಗುಂಪು ಮಾಡಿ ರಾಜ್ಯವನ್ನು ಕಗ್ಗತ್ತಲಲ್ಲಿರಿಸಿದ ಟಿಪ್ಪು ಸುಲ್ತಾನ್, ಹುಲಿಯೂ ಅಲ್ಲ, ಇಲಿಯೂ ಅಲ್ಲ. ಅಂತಹ ವ್ಯಕ್ತಿಯ ಜಯಂತಿ ಯನ್ನು ಆಚರಿಸುವ ಮೂಲಕ ಸರ್ಕಾರ ರಾಜ್ಯದ ಜನತೆಯ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಟಿಪ್ಪು ಜಯಂತಿ ವಿರೋಧಿಸುತ್ತಿದ್ದ ಹೆಚ್.ಡಿ. ಕುಮಾರಸ್ವಾಮಿ, ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮುಲಾಜಿಗೊಳಗಾಗಿ ಜಯಂತಿ ಆಚರಿಸಲು ಮುಂದಾಗಿ ದ್ದಾರೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಬೇಕು, ಹಾಗೆ ಮಾಡದೇ ಇಬ್ಬಗೆ ನೀತಿ ಅನುಸರಿಸುತ್ತಾ, ಕಾಂಗ್ರೆಸ್ಸಿಗರಿಗಾಗಿ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಮಾತ ನಾಡಿ, ಟಿಪ್ಪು ಜಯಂತಿ ಬಗ್ಗೆ ಆಸಕ್ತಿ ಇಲ್ಲದವರು ತೆಪ್ಪಗೆ ಮನೆಯ ಲ್ಲಿರಲಿ ಎಂದಿರುವ ಮುಖ್ಯಮಂತ್ರಿಗಳು, ನಾವು ರಾಮಮಂದಿರ ನಿರ್ಮಿಸುತ್ತೇವೆ ಅವರು ತೆಪ್ಪಗೆ ಮನೆಯಲ್ಲಿರಲಿ ಎಂದರು.
ಕೇವಲ ಒಂದು ಸಮುದಾಯದ ಮತಗಳನ್ನು ಸೆಳೆ ಯಲು ಟಿಪ್ಪು ಜಯಂತಿ ಆಚರಿಸುತ್ತಿರುವ ಸರ್ಕಾರ ಜನರ ವಿರೋಧಿ ಯಾಗಿದ್ದು, ಶನಿವಾರ ಆಯೋಜಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ರದ್ದುಗೊಳಿಸದಿದ್ದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಾಸಕ ಎಲ್.ನಾಗೇಂದ್ರ, ಪಕ್ಷದ ಮುಖಂಡರಾದ ಪ್ರಭಾ ಕರರಾವ್ ಸಿಂಧೆ, ಮೈಪು ರಾಜೇಶ್, ಆರ್.ಕೆ.ಶರ್ಮ, ಶ್ರೀರಾಂ, ಸು.ಮುರಳಿ, ಎಂ.ಚಿಕ್ಕವೆಂಕಟು, ಶರತ್ ಬಾಬು, ಬಲರಾಮ್, ವೇದಾವತಿ, ರಂಗಸ್ವಾಮಿ ಹಾಗೂ ಹಲವು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಬಿಜೆಪಿ ಘಟಕ: ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ಮೈಸೂರಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಬಳಿ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಕಾರ್ಯಕರ್ತರೂ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಶಾಸಕ ಎಲ್.ನಾಗೇಂದ್ರ, ಚಾಮುಂಡೇ ಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎನ್.ಅರುಣ್ ಕುಮಾರ್‍ಗೌಡ, ಜಗದೀಶಗೌಡ, ಸುರೇಶ್ ಬಾಬು, ನಾಗರಾಜ್ ಮಲ್ಲಾಡಿ, ತೋಟದಪ್ಪ ಬಸವರಾಜು, ಹೊಸಹಳ್ಳಿ ವೆಂಕಟೇಶ್ ಸೇರಿ ದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜ್ಯ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ವಿರೋ ಧಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಸಂಚು ನಡೆಸಿದ್ದಾರೆಂದು ಆರೋಪಿಸಿ ಚಾಮರಾಜ ವಿಧಾನಸಭಾ ಕ್ಷೇತ್ರದ ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ದೇವರಾಜ ಮಾರುಕಟ್ಟೆಯ ಬಳಿ ಚಿಕ್ಕ ಗಡಿಯಾರದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿ ರುವ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಸು ಮಾತನಾಡಿ, ಈ ಹಿಂದೆ ಟಿಪ್ಪು ಸುಲ್ತಾನ್ ಜಯಂತಿ ಸಮರ್ಥಿಸಿ ಕೊಂಡಿದ್ದ ಹಾಗೂ ಟಿಪ್ಪು ಸುಲ್ತಾನ್ ಪುಸ್ತಕಕ್ಕೆ ಮುನ್ನುಡಿ ಬರೆದ ಜಗದೀಶ್ ಶೆಟ್ಟರ್ ಇಂದು ಟಿಪ್ಪು ಜಯಂತಿಯನ್ನು ರಾಜಕೀಯ ಲಾಭ ಹಾಗೂ ಕೋಮು ಸೌಹಾರ್ದತೆ ಹದಗೆಡಿ ಸುವುದಕ್ಕಾಗಿ ವಿರೋಧಿಸುತ್ತಿದ್ದಾರೆ. ಸಂವಿಧಾನದಲ್ಲಿ ಸರ್ವಧರ್ಮವನ್ನು ಗೌರವಿಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ಧರ್ಮ ಗಳ ಮಹನೀಯರ ಜಯಂತಿಯನ್ನು ಆಚರಿಸುವುದರೊಂದಿಗೆ ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳುವ ಪ್ರಯತ್ನಕ್ಕೆ ಬಿಜೆಪಿ ನಾಯಕರು ತಡೆಯೊಡ್ಡಿ, ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿರುವುದು ವಿಷಾದನೀಯ ಎಂದರು. ಟಿಪ್ಪು ಸುಲ್ತಾನ್ ವಿರುದ್ದ ಬಿಜೆಪಿ ನಾಯಕರು ಮಾಡುತ್ತಿರುವ ಆಧಾರ ರಹಿತ ಆರೋಪ ಗಳು ಹಾಗೂ ಅಪಪ್ರಚಾರಕ್ಕೆ ಜನರು ಮನ್ನಣೆ ನೀಡಬಾರದು. ನಾಳೆ ನಡೆಯಲಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಪಾಲಿಕೆ ಸದಸ್ಯ ರಾದ ಉಷಾ ಕುಮಾರ್, ಪುಷ್ಪಲತಾ ಜಗನ್ನಾಥ್, ಮಾಜಿ ಮೇಯರ್ ಬಿ.ಕೆ.ಪ್ರಕಾಶ್, ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಟಿ.ಸುಂದರ್ ಕುಮಾರ್, ಡೈರಿ ವೆಂಕಟೇಶ್, ಹೇಮಂತ್‍ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

 

Translate »