ಮೈಸೂರು: ದೇಶದ ಬಹುಸಂಖ್ಯಾತರ ಆರಾಧ್ಯ ದೈವ ಶಿವ ಲಿಂಗ ಹಾಗೂ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕುರಿತಂತೆ ಕೇಂದ್ರದ ಮಾಜಿ ಸಚಿವರೂ ಆದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ನಗರ ಯುವ ಮೋರ್ಚಾ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ಚೌಕದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ದೇಶದ ಪ್ರಧಾನಮಂತ್ರಿಗಳಿಗೆ ಅಗೌರವ ತೋರಿರುವ ಕಾಂಗ್ರೆಸ್ ನಾಯಕ ಶಶಿ ತರೂರ್‍ಗೆ ಧಿಕ್ಕಾರ, ಹಿಂದೂಗಳ ಆರಾಧ್ಯ ದೈವ ಶಿವಲಿಂಗದ ಬಗ್ಗೆ ಕೀಳು ಮಟ್ಟದ ಉದಾಹರಣೆ ನೀಡಿ ರುವ ಶಶಿತರೂರ್‍ಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ನಡೆದ ಸಾಹಿತ್ಯೋತ್ಸವ ದಲ್ಲಿ ತಾವು ಬರೆದಿರುವ ಪುಸ್ತಕ ಕುರಿತು ಮಾತನಾಡಿರುವ ಶಶಿ ತರೂರ್, ಈ ವೇಳೆ ಶಿವಲಿಂಗ ಹಾಗೂ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇ ಳನಾಕಾರಿ ಹೇಳಿಕೆ ನೀಡಿದ್ದಾರೆ. ರಾಜ ಕಾರಣದಲ್ಲಿ ಆರೋಪ-ಪ್ರತ್ಯಾರೋಪ, ಟೀಕೆ-ಟಿಪ್ಪಣಿಗಳು ಸಾಮಾನ್ಯ ಸಂಗತಿ. ಆದರೆ ಈ ರೀತಿ ಕೀಳು ಮಟ್ಟದ ಪದ ಗಳಲ್ಲಿ ಟೀಕೆ ಮಾಡುವುದು ಎಷ್ಟು ಸರಿ? ಎಂದು ಕಿಡಿಕಾರಿದರು.
ಒಂದೆಡೆ ಶಶಿತರೂರ್ ಅವರ ನಾಯಕ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ವರು ಶಿವ ದೇವಾಲಯಗಳಿಗೆ ಭೇಟಿ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಇವರು ಕೀಳು ಮಟ್ಟದ ಉದಾಹರಣೆಗೆ ಶಿವಲಿಂಗವನ್ನು ಪ್ರಸ್ತಾಪಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಇಬ್ಬಂದಿ ನೀತಿಯನ್ನು ತೋರುತ್ತದೆ. ನರೇಂದ್ರ ಮೋದಿಯವರು ಕೇವಲ ಒಂದು ಪಕ್ಷದ ನಾಯಕರು ಮಾತ್ರವಲ್ಲ. ಅದಕ್ಕೂ ಮೀಗಿಲಾಗಿ ಅವರು ದೇಶದ ಪ್ರಧಾನಿಯಾಗಿದ್ದು, ಅವರ ಸ್ಥಾನಕ್ಕೆ ಗೌರವ ಕೊಡುವುದನ್ನು ಯಾರೂ ಮರೆಯ ಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಶ್ವದ ಅಗ್ರಗಣ್ಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವಗುರು ಸ್ಥಾನದತ್ತ ಸಾಗುತ್ತಿದೆ. ಇಂತಹ ಅಗ್ರಗಣ್ಯ ನಾಯಕ ನರೇಂದ್ರ ಮೋದಿಯವರನ್ನು ಟೀಕಿಸಲು ಕೀಳು ಮಟ್ಟದಲ್ಲಿ ಉದಾ ಹರಣೆ ನೀಡಿರುವ ಶಶಿತರೂರ್ ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸ ಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಯೂ ಆದ ಪಾಲಿಕೆ ಸದಸ್ಯ ಸತೀಶ್, ಯುವ ಮೋರ್ಚಾ ನಗರಾಧ್ಯಕ್ಷ ಗೋಕುಲ್ ಗೋವರ್ಧನ್, ಪ್ರಧಾನ ಕಾರ್ಯದರ್ಶಿ ಬಿ.ಸಂಪತ್, ಕಾರ್ಯಕರ್ತರಾದ ಜಯ ಶಂಕರ್, ಕಿರಣ್‍ಗೌಡ, ದೀಪಕ್, ಅರ್ಜುನ್, ಲೋಹಿತ್ ಸೇರಿದಂತೆ ಮತ್ತಿತ ರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.