ಮೈಸೂರು, ನ.3 (ಆರ್‍ಕೆಬಿ)- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿದ್ದು, ಅವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಎಸ್‍ಸಿ ಮೋರ್ಚಾ ಮೈಸೂರು ನಗರ ಮತ್ತು ಜಿಲ್ಲಾ ಘಟಕದ ವತಿಯಿಂದ ಬುಧವಾರ ಮೈಸೂರು ಪುರಭವನದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿ ಭಟನೆ ನಡೆಸಲಾಯಿತು.
ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸು ವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಕೂಡಲೇ ದಲಿತರ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸ ಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಮಾತನಾಡಿ, ಚುನಾವಣಾ ಪ್ರಚಾರದ ಭರ ದಲ್ಲಿ ಸಿದ್ದರಾಮಯ್ಯ ದಲಿತರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ಎಸ್‍ಸಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ದಲಿತ ವರ್ಗದ ನಾಯಕರನ್ನು ತುಳಿಯುತ್ತಿದ್ದಾರೆ. ತಮ್ಮನ್ನು ಮುಖ್ಯಮಂತ್ರಿ ಮಾಡಲು ಓಡಾ ಡಿದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಅಗೌರವವಾಗಿ ನಡೆಸಿಕೊಂಡರು. ಪಕ್ಷದ ದಲಿತ ನಾಯಕ ಡಾ.ಪರಮೇಶ್ವರ್ ಅವರನ್ನು ಸೋಲಿಸಿದರು. ಬಾಯಲ್ಲಿ ಅಹಿಂದ ಎಂದು ಹೇಳುತ್ತಾ ದಲಿತ ವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿ, ಸಿದ್ದರಾಮಯ್ಯರ ಮನಸ್ಥಿತಿಯೇ ಕಾಂಗ್ರೆಸ್ಸಿನದ್ದೂ ಆಗಿದೆ. ತಮಗೆ ರಾಜಕೀಯ ರಕ್ಷಣೆ ನೀಡಿದ ಅಪ್ರತಿಮ ದಲಿತರ ನಾಯಕ ವಿ.ಶ್ರೀನಿ ವಾಸಪ್ರಸಾದ್ ಅವರ ಬೆನ್ನಿಗೆ ಚೂರಿ ಹಾಕಿ ದವರು. ಕಾಂಗ್ರೆಸ್‍ಗೆ ಕರೆತಂದ ಹೆಚ್.ವಿಶ್ವ ನಾಥ್ ಅವರನ್ನೇ ಕಾಂಗ್ರೆಸ್‍ನಿಂದ ಹೊರ ಹಾಕಿದವರು. ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಯಾಗುತ್ತಾರೆಂದು ಪರಮೇಶ್ವರ್ ಅವ ರನ್ನು ಸೋಲಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್ ಗೌಡ, ಮೈಲ್ಯಾಕ್ ಅಧ್ಯಕ್ಷ ಎನ್.ವಿ. ಫಣೀಶ್, ನಗರಪಾಲಿಕೆ ಸದಸ್ಯರಾದ ಎಂ.ಯು. ಸುಬ್ಬಯ್ಯ, ಶಿವಕುಮಾರ್, ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಹೆಚ್.ಜಿ. ಗಿರಿಧರ್, ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಎಂ.ಮಹದೇವಯ್ಯ, ನಗರಾ ಧ್ಯಕ್ಷ ಸಿ. ಈಶ್ವರ್, ರಾಜ್ಯ ಪ್ರಧಾನ ಕಾರ್ಯ ದರ್ಶಿ ಎಂ.ಎಸ್.ಪರಮಾನಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಕೃಷ್ಣಮೂರ್ತಿ, ಡಿ.ಮಂಜು ನಾಥಬಾಬು, ನಗರ ಪ್ರಧಾನ ಕಾರ್ಯ ದರ್ಶಿ ಜಯರಾಂ, ನರಸಿಂಹ ಮೂರ್ತಿ, ಸು.ಮುರಳಿ ಇನ್ನಿತರರು ಉಪಸ್ಥಿತರಿದ್ದರು.