ಸೋಮವಾರಪೇಟೆಯಲ್ಲೂ ಬಿಜೆಪಿ ಪ್ರತಿಭಟನೆ
ಕೊಡಗು

ಸೋಮವಾರಪೇಟೆಯಲ್ಲೂ ಬಿಜೆಪಿ ಪ್ರತಿಭಟನೆ

January 8, 2019

ಸೋಮವಾರಪೇಟೆ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದರೂ ಸಹ ರಾಜ್ಯ ಸರ್ಕಾರ ಬೆಲೆ ಏರಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದ್ದರೂ, ರಾಜ್ಯ ಸರ್ಕಾರ ಎರಡೂ ಉತ್ಪನ್ನಗಳ ಮೇಲೆ ಬೆಲೆ ಏರಿಸಿರುವುದು ಖಂಡನೀಯ. ಅಧಿಕಾರಕ್ಕೆ ಬಂದಾಗಿನಿಂ ದಲೂ ಜನವಿರೋಧಿ ನೀತಿಯನ್ನೇ ರಾಜ್ಯ ಸರ್ಕಾರ ಅನುಸರಿಸುತ್ತಿದೆ ಎಂದು ಆರೋಪಿ ಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಹಿಂದು ಳಿದ ವರ್ಗಗಳ ಸಚಿವ ಕಾಂಗ್ರೆಸ್‍ನ ಪುಟ್ಟರಂಗ ಶೆಟ್ಟಿ ಅವರ ಕಚೇರಿ ಸಿಬ್ಬಂದಿ ರೂ. 25.75 ಲಕ್ಷವನ್ನು ಗುತ್ತಿಗೆದಾರರಿಂದ ಕಮಿಷನ್ ಪಡೆಯುವ ಮೂಲಕ ವಿಧಾನ ಸೌಧಕ್ಕೆ ಕಳಂಕ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಕಮಿಷನ್ ದಂಧೆಯಲ್ಲಿ ತೊಡಗಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ದುರಾಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ವಜಾ ಮಾಡುವ ಮೂಲಕ ಕಮಿಷನ್ ದಂಧೆಯಲ್ಲಿ ತೊಡಗಿರುವ ಪುಟ್ಟ ರಂಗಶೆಟ್ಟಿ ಅವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಶಾಸಕರು ಆಗ್ರಹಿ ಸಿದರು. ಈ ಸಂಬಂಧಿತ ಮನವಿ ಪತ್ರವನ್ನು ತಾಲೂಕು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಪ್ರಧಾನ ಕಾರ್ಯದರ್ಶಿ ಮನು ಕುಮಾರ್ ರೈ, ಜಿಪಂ ಸದಸ್ಯೆ ಸರೋ ಜಮ್ಮ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ಸದಸ್ಯ ಕುಶಾ ಲಪ್ಪ, ಪ.ಪಂ. ಸದಸ್ಯ ಮಹೇಶ್ ಸೇರಿ ದಂತೆ ಇತರರು ಭಾಗವಹಿಸಿದ್ದರು.

Translate »