ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಮಂಡ್ಯ

ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

July 20, 2018

ಮಂಡ್ಯ:  ರೈತರ ಜೀವನಾಡಿ ಮೈಷುಗರ್ ಕಾರ್ಖಾನೆ ಶೀಘ್ರ ಪ್ರಾರಂಭಿ ಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯ ಕರ್ತರು ನಗರದಲ್ಲಿಂದು ಪ್ರತಿಭಟನಾ ಧರಣಿ ನಡೆಸಿದರು.

ಸರ್‍ಎಂವಿ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮೈಷುಗರ್ ಕಾರ್ಖಾನೆ ಶೀಘ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಬೆಳೆ ನಷ್ಟದಿಂದ 100ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಕಬ್ಬು ಬೆಳೆದಿದ್ದು ಕಬ್ಬು ಕಟಾವು ಸಮಯವಾಗಿರುವುದರಿಂದ ಶೀಘ್ರ ಮೈಷುಗರ್ ಕಾರ್ಖಾನೆ ಆರಂಭಿಸಿದರೆ ರೈತರಿಗೆ ಬಹಳ ಅನುಕೂಲವಾಗುತ್ತದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಶುಕ್ರವಾರ ನಗರಕ್ಕೆ ಆಗ ಮಿಸುತ್ತಿದ್ದು, ಸಮಾವೇಶದಲ್ಲಿ ಮೈಷುಗರ್ ಆರಂಭಿಸುವ ಕುರಿತು ಘೋಷಣೆ ಮಾಡಬೇಕು. ಮೈಷುಗರ್ ಕಾರ್ಖಾನೆಗೆ ಹೆಚ್ಚಿನ ಅನುದಾನ ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಎಚ್.ಆರ್. ಅಶೋಕ್, ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ವರದರಾಜು, ಮಹಂತಪ್ಪ, ಹನಿಯಂಬಾಡಿ ನಾಗ ರಾಜು, ಕೃಷ್ಣ ಇತರರಿದ್ದರು.

Translate »