ಇಂಧನ ತೆರಿಗೆ ಹೆಚ್ಚಳ, ಸಚಿವ ಪುಟ್ಟರಂಗಶೆಟ್ಟಿ   ರಾಜೀನಾಮೆಗೆ ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು

ಇಂಧನ ತೆರಿಗೆ ಹೆಚ್ಚಳ, ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ

January 8, 2019

ಮೈಸೂರು: ಪೆಟ್ರೋಲ್-ಡೀಸೆಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿರು ವುದನ್ನು ಖಂಡಿಸಿ, ಸಚಿವ ಪುಟ್ಟರಂಗಶೆಟ್ಟಿ ರಾಜೀ ನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತ್ಯೇಕ ಮೂರು ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಕೃಷ್ಣರಾಜ, ಚಾಮರಾಜ ಮತ್ತು ನರ ಸಿಂಹರಾಜ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪ್ರತಿ ಭಟನೆ ನಡೆಸಿ, ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಕೂಡಲೇ ಜನ ಸಾಮಾನ್ಯರಿಗೆ ಹೊರೆಯಾಗುವ ಇಂಧನ ತೆರಿಗೆ ಹೆಚ್ಚಳ ಮಾಡಿರುವುದನ್ನು ಕೈ ಬಿಡುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು. ಅಲ್ಲದೆ ವಿಧಾನಸೌಧದ ಬಳಿ ಭಾರಿ ಮೊತ್ತದೊಂದಿಗೆ ಸಚಿವರ ಕಚೇರಿ ಸಿಬ್ಬಂದಿಯೊಬ್ಬರು ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಸಚಿವ ಪುಟ್ಟರಂಗಶೆಟ್ಟಿ ಅವರನ್ನು ಕೈ ಬಿಡುವಂತೆ ಒತ್ತಾಯಿಸಿದರು.

ಕೆ.ಆರ್. ಕ್ಷೇತ್ರ: ಮೈಸೂರಿನ ಅಗ್ರಹಾರ ವೃತ್ತದಲ್ಲಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಕೆ.ಆರ್.ಕ್ಷೇತ್ರದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಇಂಧನದ ಮೇಲಿನ ತೆರಿಗೆ ಹೆಚ್ಚಳ ಕೈಬಿಡುವಂತೆ ಆಗ್ರಹಿಸಿದರು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಮಾತ ನಾಡಿ, ಕೇಂದ್ರ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದವರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತೈಲ ಬೆಲೆ ಕಡಿಮೆ ಮಾಡಿದೆ. ಕಳೆದ ಎರಡು ತಿಂಗಳಿಂದ ಗಣನೀಯ ಪ್ರಮಾಣದಲ್ಲಿ ತೈಲ ಬೆಲೆ ಇಳಿಮುಖವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ತೆರಿಗೆ ದರ ಹೆಚ್ಚಳ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ಗದಾ ಪ್ರಹಾರ ಮಾಡಿದೆ. ಅದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮಂತ್ರಿಯೊಬ್ಬರ ಸಹಾಯಕ ಹಣದೊಂದಿಗೆ ಸಿಕ್ಕಿ ಬಿದ್ದಿದ್ದಾರೆ. ವಿಧಾನಸೌಧದ ಬಳಿಯೇ ಹಣದೊಂದಿಗೆ ಸಿಕ್ಕಿಬಿದ್ದಿರುವುದರಿಂದ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎಂಬುದನ್ನು ಮನಗಾಣಬಹುದು. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀ ನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಪಾಲಿಕೆಯಲ್ಲಿ ವಿರೋಧ ಪಕ್ಷ ನಾಯಕ ಬಿ.ವಿ.ಮಂಜುನಾಥ್, ಪಾಲಿಕೆಯ ಮಾಜಿ ಸದಸ್ಯ ಎ.ವಿ.ವಿದ್ಯಾ ಅರಸ್, ಎಂ.ಸಿ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಾಮರಾಜ ಕ್ಷೇತ್ರ: ಮೈಸೂರಿನ ಗಾಂಧಿ ವೃತ್ತದಲ್ಲಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇದೇ ವೇಳೆ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಕೇಂದ್ರ ಸರ್ಕಾರವು ತೈಲ ಬೆಲೆ ಕಡಿಮೆಗೊಳಿಸಿದ್ದರೂ ರಾಜ್ಯ ಸರ್ಕಾರವು ಹೆಚ್ಚು ತೆರಿಗೆ ವಿಧಿಸುವ ಮೂಲಕ ಜನರಿಗೆ ಹೊರೆ ಹಾಕುತ್ತಿದೆ. ಇಂಧನ ದರ ಹೆಚ್ಚಳ ವಾದಾಗ ಸಮ್ಮಿಶ್ರ ಸರ್ಕಾರದ ಪ್ರಮುಖರು ಬೊಬ್ಬೆ ಹೊಡೆಯುತ್ತಿದ್ದರು. ಈಗ ಅವರು ಚಕಾರವೆತ್ತಿಲ್ಲ. ರಾಜ್ಯ ಸರ್ಕಾರದ ದ್ವಂದ್ವ ನಿಲುವು ಇದರಿಂದ ತಿಳಿ ಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಚಿವ ಪುಟ್ಟರಂಗಶೆಟ್ಟಿ ಕಚೇರಿ ಸಿಬ್ಬಂದಿ ಬಳಿ 25 ಲP್ಷÀ ರೂ. ಹಣ ಸಿಕ್ಕಿದ್ದು, ಸಮ್ಮಿಶ್ರ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎನ್ನುವುದು ಸ್ಪಷ್ಟವಾಗು ತ್ತಿದೆ. ಸಚಿವ ಪುಟ್ಟರಂಗಶೆಟ್ಟಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟ ದಾರ್ಯ ಸೇರಿದಂತೆ ಚಾಮರಾಜ ಕ್ಷೇತ್ರದ ಬಿಜೆಪಿ ಮುಖಂಡರು , ಕಾರ್ಯಕರ್ತರು ಪಾಲ್ಗೊಂಡಿದ್ದರು.
ಎಫ್‍ಟಿಎಸ್ ವೃತ್ತ: ನರಸಿಂಹರಾಜ ಕ್ಷೇತ್ರದ ಕಾರ್ಯಕರ್ತರು ಎಫ್‍ಟಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರಾಧ್ಯP್ಷÀ ಡಾ.ಮಂಜುನಾಥ್ ಮಾತನಾಡಿ, ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಸೆಪ್ಟೆಂಬರ್‍ನಲ್ಲಿ ಭಾರತ ಬಂದ್‍ಗೆ ಕರೆ ನೀಡಿದಾಗ ರಾಜ್ಯ ಸರ್ಕಾರದ ವತಿಯಿಂದ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಂದ್‍ಗೆ ಬೆಂಬಲ ಸೂಚಿಸಿದ್ದರು. ರಾಜ್ಯ ಸರಕಾರ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಿ, ಬಂದ್‍ಗೆ ಬೆಂಬಲ ನೀಡಿ ದ್ದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯ ಏರಿಳಿತದಿಂದಾಗಿ ತೈಲ ಬೆಲೆ ಹೆಚ್ಚಾಗಿದ್ದರೂ ಅದನ್ನು ಕೇಂದ್ರ ಸರಕಾರದ ತಲೆಗೆ ಕಟ್ಟುವ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯ ಏರಿಳಿತದಿಂದಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾದಾಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಅಧ್ಯP್ಷÀ ರಾಹುಲ್ ಗಾಂಧಿ, ರಾಜ್ಯ ಸರಕಾರದ ನಿರ್ಣಯದ ಕುರಿತು ಪ್ರಶ್ನಿಸದೆ ಮೌನ ವಹಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪP್ಷÀದ ಇಬ್ಬಂದಿತನವನ್ನು ಇದು ತೋರಿಸು ತ್ತದೆ. ಸಾಮಾಜಿಕ ನ್ಯಾಯದ ಕುರಿತು ಮಾತನಾಡುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಾರೆಯೇ? ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಬಿ.ಪಿ. ಮಂಜುನಾಥ್, ಸಂದೇಶ್ ಸ್ವಾಮಿ, ಗಿರಿಧರ್, ಲೋಹಿತ್, ನರಸಿಂಹರಾಜ ಕ್ಷೇತ್ರ ಬಿಜೆಪಿ ಅಧ್ಯP್ಷÀ ಸು. ಮುರಳಿ, ನಗರಪಾಲಿಕೆ ಸದಸ್ಯರಾದ ಅಶ್ವಿನಿ, ರತ್ನಾ ಲಕ್ಷ್ಮಣ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »