ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ : ಕೇಂದ್ರ ಸಚಿವರು, ಸಂಸದರಿಗೆ ಸ್ಥಾನ

ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸಚಿವರು, ಸಂಸದರು ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸೇರಿದಂತೆ 40 ಪ್ರಮುಖ ಸ್ಟಾರ್ ಪ್ರಚಾರಕರ ಸ್ಥಾನವನ್ನು ನೀಡಲಾಗಿದೆ.

ಇನ್ನು ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರಗೆ ಸ್ಥಾನ ಇಲ್ಲ, ಇನ್ನೊಬ್ಬ ಪುತ್ರ ಸಂಸದ ಬಿ.ವೈ.ರಾಘ ವೇಂದ್ರಗೂ ಪಟ್ಟಿಯಲ್ಲಿ ಸ್ಥಾನವನ್ನು ನೀಡಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆಗೊಳಿಸಿದ್ದು, ಯಡಿಯೂರಪ್ಪಗಿಂತ ನಳಿನ್‍ಕುಮಾರ್ ಕಟೀಲ್ ಅವರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಅವರ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಊಹಾಪೆÇೀಹಗಳ ಬೆನ್ನಲ್ಲೇ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸಿಎಂಗಿಂತ ಮೇಲೆ ನಳಿನ್ ಅವರ ಹೆಸರು ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.