ಯೋಜನೆಗೆ ಬಿಜೆಪಿ ತೀವ್ರ ವಿರೋಧ: ಹೋರಾಟದ ಎಚ್ಚರಿಕೆ
ಮೈಸೂರು

ಯೋಜನೆಗೆ ಬಿಜೆಪಿ ತೀವ್ರ ವಿರೋಧ: ಹೋರಾಟದ ಎಚ್ಚರಿಕೆ

January 3, 2019

ಬೆಂಗಳೂರು: ಪರಿಸರ ಪ್ರೇಮಿಗಳು ಹಾಗೂ ನಗರದ ನಾಗರಿಕರ ಹೋರಾಟಕ್ಕೆ ಮಣಿದು ಶಿವಾನಂದ ವೃತ್ತದಿಂದ ಹೆಬ್ಬಾಳ ಫ್ಲೈಓವರ್‍ವರೆಗೆ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಟ್ಟಿದ್ದ ಸರ್ಕಾರ ಮತ್ತೆ ಈ ದುಸ್ಸಾಹಸಕ್ಕೆ ಮುಂದಾಗಿದ್ದು, ಯೋಜನೆ ಸಾಕಾರಗೊಳ್ಳಲು ಬಿಡುವುದಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ನಾಯಕರಾದ ಕಟ್ಟಾಸುಬ್ರಹ್ಮಣ್ಯ ನಾಯ್ಡು ಮತ್ತು ಬಿ.ಜೆ.ಪುಟ್ಟಸ್ವಾಮಿ, ಹಿಂದಿನ ಸರ್ಕಾರದ ಅವಧಿಯಲ್ಲೇ ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಹಿಂದೆ ಸರಿಯಲಾಗಿತ್ತು, ಪುನಃ ಮುಂದಾದರೆ ಪರಿಸರವಾದಿಗಳು, ನಗರ ನಾಗರಿಕರ ಸಹಕಾರದೊಂದಿಗೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಹುನ್ನಾರ ಕೈಬಿಡಬೇಕು, ಈ ಯೋಜನೆಗೆ ಅಂದು ವಿರೋಧ ಪಕ್ಷದಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿ ದ್ದರು. ಈಗ ನಿಲುವು ಬದಲಾಗಲು ಕಾರಣವೇನು.

ಶಿವಾನಂದ ವೃತ್ತದ ಬಳಿ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ 2 ವರ್ಷವಾದರೂ ಮುಗಿದಿಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಕಡೆಗಣಿಸಿದೆ, ಇನ್ನು ಬೆಂಗಳೂರು ಅಭಿವೃದ್ಧಿ ಮಾಡುತ್ತೇವೆ ಎಂದು ಹೊರಟಿರುವುದು ಮೂರ್ಖತನದ ಪರಮಾವಧಿ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜವಾಬ್ದಾರಿ ಅರಿತು ಮಾತನಾಡಬೇಕು, ಕೀಳುಮಟ್ಟದ ಆರೋಪ ನಿಲ್ಲಿಸದಿದ್ದರೆ ನಾವೂ ಅದೇ ಭಾಷೆಯಲ್ಲೇ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಬೂತ್‍ಮಟ್ಟದಿಂದ ರಣತಂತ್ರ ರೂಪಿಸಲಾಗುತ್ತಿದೆ. ಯಡಿಯೂರಪ್ಪ ಅವರ ಜನ್ಮದಿನದಂದು ರಾಜ್ಯದಲ್ಲಿ ಬೃಹತ್ ಸಮಾವೇಶ ಆಯೋಜಿಸುವ ಉದ್ದೇಶ ಇದೆ.
ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಾಗುತ್ತಿಲ್ಲ, ರೈತರ ಸಾಲ ಮನ್ನಾ ಕೇವಲ ಚುನಾವಣಾ ಗಿಮಿಕ್, ಈ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿವೆ ಎಂದರು.

Translate »