ಬೆಂಗಳೂರು: ಲೋಕ ಸಭಾ ಚುನಾವಣೆ ಹತ್ತಿರ ವಾಗುತ್ತಿರುವ ಹಿನ್ನೆಲೆ ಯಲ್ಲಿ ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಅಂತಿಮಗೊಳಿ ಸುವ ಸಂಬಂಧ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದಾರೆ.
ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪೂರ್ಣ ಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಈ ಕುರಿತು ಪಕ್ಷದ ದೆಹಲಿ ವರಿಷ್ಠರೊಂದಿಗೆ ಚರ್ಚಿಸಲು ಯಡಿಯೂ ರಪ್ಪ ತೆರಳುತ್ತಿದ್ದು, ಪಕ್ಷದ ಕೇಂದ್ರ ಚುನಾ ವಣಾ ಸಮಿತಿಗೆ ರಾಜ್ಯ ಘಟಕ ಸಿದ್ಧಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲಿದ್ದಾರೆ.ಪಕ್ಷದ ಕೇಂದ್ರ ವರಿಷ್ಠರು ಒಪ್ಪಿಗೆ ಸೂಚಿಸುವ ಅಭ್ಯರ್ಥಿಗಳ ಪಟ್ಟಿಗೆ ಎಲ್ಲರೂ ಬದ್ಧರಾಗಿರಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಪಕ್ಷದ ಕೇಂದ್ರ ನಾಯಕರು ತಮ್ಮದೇ ಆದ ಮೂಲ ಹಾಗೂ ವಿವಿಧ ಸಮೀಕ್ಷಾ ವರದಿ ಆಧರಿಸಿ ಆಕಾಂಕ್ಷಿ ಅಭ್ಯರ್ಥಿಗಳ ಪಟ್ಟಿ ತಯಾರಿಸಿಕೊಂಡಿದ್ದು, ಯಡಿಯೂರಪ್ಪ ತರುವ ಪಟ್ಟಿಯೊಂದಿಗೆ ಗೆಲ್ಲುವ ಅಭ್ಯರ್ಥಿ ಯಾರೆಂಬುದನ್ನು ಹೋಲಿಕೆ ಮಾಡಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.