ಮುಂಬರುವ ಚುನಾವಣೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ
ಚಾಮರಾಜನಗರ

ಮುಂಬರುವ ಚುನಾವಣೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ

July 10, 2021

ಚಾಮರಾಜನಗರ, ಜು.9(ಎಸ್‍ಎಸ್)- ಮುಂಬರುವ ಜಿಪಂ, ತಾಪಂ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾ ಲಯದಲ್ಲಿ ನಡೆದ ತಾಲೂಕು ಗ್ರಾಮಾಂತರ ಮಂಡಲ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶದ ಉದ್ದಗಲಕ್ಕೂ ಕಾರ್ಯಕರ್ತರ ಪಡೆ ಹೊಂದಿರುವ ಏಕೈಕ ಪಕ್ಷ. `ಸರ್ವ ಸ್ಪರ್ಶಿ ಸರ್ವ ವ್ಯಾಪಿ’ ತತ್ವದಡಿ ಬೆಳೆದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳನ್ನೂ ಪ್ರಗತಿಯತ್ತ ಕೊಂಡ್ಯೊಯುತ್ತಿದ್ದಾರೆ. ವಿಶೇಷವಾಗಿ ಕೋವಿಡ್ ತಡೆಗೆ ಲಾಕ್‍ಡೌನ್ ಘೋಷಿಸಿ, ಹೆಚ್ಚಿನ ಪ್ರಾಣ ಹಾನಿ ತಡೆದಿದ್ದಾರೆ. ಅಲ್ಲದೇ ವಿಜ್ಞಾನಿಗಳ ಮೂಲಕ ಲಸಿಕೆ ಕಂಡು ಹಿಡಿದೆ ದೇಶದ ಜನರಿಗೆ ಅಲ್ಲದೆ ವಿದೇ ಶದ ಜನರಿಗೂ ನೀಡುವ ಮೂಲಕ ಕೊರೊನಾ ತಡೆಗಟ್ಟುವಲ್ಲಿ ಸಫಲರಾಗಿ ದ್ದಾರೆ. ಹೀಗಾಗಿ ಜನರು ಬಿಜೆಪಿ ಪರ ವಿಶ್ವಾಸ ಹೊಂದಿದ್ದಾರೆ ಎಂದರು.

ಶಾಸಕ.ಸಿಎಸ್. ನಿರಂಜನ್‍ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರೊ. ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ ದರು. ಇದೇ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ಬಸವಣ್ಣ ಅವರಿಗೆ ಜಿಲ್ಲಾಧ್ಯಕ್ಷ ಆರ್.ಸುಂದರ್ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿ ಸಿದರು. ಸಮಾರಂಭದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ ಪ್ರತಾಪ್, ನಾರಾಯಣ್ ಪ್ರಸಾದ್, ಪದ್ಮ, ಹಾಸನ ಪ್ರಭಾರಿ ನಿಜಗುಣ ರಾಜು, ಜಿಲ್ಲಾ ಉಪಾಧ್ಯಕ್ಷ ಪಿ.ವೃಷಬೇಂದ್ರ, ಡಾ.ಎ. ಆರ್.ಬಾಬು ಸೇರಿದಂತೆ ಹಲವರಿದ್ದರು.

Translate »