2023ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ
ಮೈಸೂರು

2023ಕ್ಕೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ

June 19, 2022

ಚಿತ್ರದುರ್ಗ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾ ವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ. ರಾಜ್ಯದ ಪ್ರತಿ ಗ್ರಾಮ ಪಂಚಾ ಯಿತಿಯಲ್ಲಿ ಕಮಲ ಅರಳಿದರೆ ಇದು ಸುಲಭವಾಗಲಿದೆ ಎಂದು ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟರು.

ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬಿಜೆಪಿ ಶನಿವಾರ ಏರ್ಪಡಿಸಿದ್ದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಜನಪರ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಿ ಸುವ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಮೇಲಿದೆ ಎಂಬುದನ್ನು ನೆನಪಿಸಿದರು. ಪ್ರಧಾನಿ ಮೋದಿ ಅವರು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುತ್ತಿ ದ್ದಾರೆ. ಗ್ರಾಮ ವಿಕಾಸ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗು ತ್ತಿದೆ. ಡಿಜಿಟಲ್ ಇಂಡಿಯಾ ರೂಪುಗೊಳ್ಳುತ್ತಿದ್ದು, ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಹಳ್ಳಿಗಳು ಜೋಡಣೆ ಯಾದರೆ ಗ್ರಾಮ ಪಂಚಾಯಿತಿಗಳು ಸಶಕ್ತಿಕರಣಗೊಳ್ಳುತ್ತವೆ ಎಂದರು.

ಪ್ರಧಾನಮAತ್ರಿ ಆವಾಸ್ ಯೋಜನೆ, ಆಯುಷ್ಮಾನ್, ಗರೀಬ್ ಕಲ್ಯಾಣ್, ಕಿಸಾನ್ ಸಮ್ಮಾನ್ ಯೋಜನೆಗಳ ಪ್ರಗತಿ ಕರ್ನಾಟಕದಲ್ಲಿ ಅತ್ಯುತ್ತಮವಾಗಿದೆ. ಬಯಲು ಶೌಚಮುಕ್ತ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ನೋಂದಣ ಮಾಡಿಸುವ ಹೊಣೆಗಾರಿಕೆ ಕಾರ್ಯಕರ್ತರ ಮೇಲಿದೆ ಎಂದರು.

Translate »