ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು

ಬೆಂಗಳೂರು, ನ.೨(ಕೆಎಂಶಿ)-ರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದರೆ, ಜೆಡಿಎಸ್ ಹೀನಾಯ ಸೋಲು ಕಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ, ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಶಿವರಾಜ್ ಸಜ್ಜನ್ ಅವರನ್ನು ೭,೩೭೩ ಅಂತರದ ಮತಗಳಿಂದ ಪರಾಭವಗೊಳಿಸಿ, ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರೆ, ವಿಜಯಪುರದ ಸಿಂದಗಿ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ರಮೇಶ್ ಭೂಸನೂರ ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್‌ನ ಅಶೋಕ್ ಮನಗೂಳಿ ಅವರನ್ನು ೩೧,೦೮೮ ಮತಗಳಿಂದ ಮಣ ಸಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಅಕಾಲಿಕ ಮರಣದಿಂದ ತೆರವಾದ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ವಿಧಾನಸಭೆಯಲ್ಲಿ ಪಕ್ಷದ ಬಲಾಬಲವನ್ನು ಹೆಚ್ಚಿಸಿಕೊಂಡಿದೆ. ಮುಖ್ಯಮಂತ್ರಿ ಪ್ರತಿನಿಧಿಸುವ ಶಿಗ್ಗಾಂವ್ ಕ್ಷೇತ್ರಕ್ಕೆ ಹೊಂದಿ ಕೊಂಡAತಿರುವ ಹಾನಗಲ್ ಕ್ಷೇತ್ರವನ್ನು ಉಳಿಸಿ ಕೊಳ್ಳಲು ಇಡೀ ಸರ್ಕಾರವೇ ಪ್ರಯತ್ನ ನಡೆಸಿದರೂ, ಸ್ಥಳೀಯ ಮತದಾರರು ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಕೈಹಿಡಿದಿದ್ದಾರೆ. ಇದರಿಂದ ಬೊಮ್ಮಾಯಿ ಅವರಿಗೆ ದೊಡ್ಡ ಹಿನ್ನಡೆಯಾಗಿದ್ದರೂ ಸಿಂದಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುವುದರ ಮೂಲಕ ಜೆಡಿಎಸ್ ಕ್ಷೇತ್ರವನ್ನು ಬಿಜೆಪಿ ಕಸಿದು ಕೊಂಡಿದೆ. ಈ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ ಬಿಜೆಪಿ ತನ್ನ ಸಂಖ್ಯಾ ಬಲವನ್ನು ಹಾಗೆಯೇ ಉಳಿಸಿಕೊಂಡಿದೆ. ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವಎಂ.ಸಿ. ಮನಗೂಳಿ ಸಿಂದಗಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರ ಅಕಾಲಿಕ ಮರಣದಿಂದ ತೆರವಾದ ಕ್ಷೇತ್ರಕ್ಕೆ ನಡೆದ ಉಪಚುನಾ ವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದರೆ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಮನಗೂಳಿ ಅವರ ಹಿರಿಯ ಪುತ್ರ ಅಶೋಕ್ ಮನಗೂಳಿ ಅವರನ್ನು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಕರೆತಂದಿದ್ದ ಆ ಪಕ್ಷದ ನಾಯಕರು ಚುನಾವಣಾ ಕಣಕ್ಕೆ ಇಳಿಸಿದ್ದರು. ಆದರೂ ಕಾಂಗ್ರೆಸ್ ಆ ಕ್ಷೇತ್ರ ದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ, ಬಿಜೆಪಿ ಅಭ್ಯರ್ಥಿ ವಿರುದ್ಧ ೩೧,೧೮೫ ಮತಗಳ ಅಂತರದಿAದ ಭಾರೀ ಸೋಲು ಕಂಡಿತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ರಾಜ್ಯ ವಿಧಾನಸಭೆಗೆ ನಡೆದ ಮೊದಲ ಉಪಚುನಾವಣೆ ಇದಾಗಿತ್ತು. ಎಲ್ಲದಕ್ಕೂ ಮಿಗಿಲಾಗಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ನಡೆದ ಉಪಚುನಾವಣೆಯೂ ಇದಾಗಿದೆ. ಮತದಾರರು ಬಿಜೆಪಿಯನ್ನು ಯಾವ ರೀತಿ ಕೈಹಿಡಿಯುತ್ತಾರೆ ಎಂಬ ಆತಂಕ ಆ ಪಕ್ಷದ ನಾಯಕರಲ್ಲಿತ್ತು, ಅಷ್ಟೇ ಅಲ್ಲದೆ, ಬೊಮ್ಮಾಯಿ ಅವರಿಗೆ ಫಲಿತಾಂಶ ಪ್ರತಿಷ್ಠೆಯಾಗಿತ್ತು. ಬಿಜೆಪಿ ತನ್ನ ಕ್ಷೇತ್ರವನ್ನು ಕಳೆದುಕೊಂಡು ತನ್ನದಲ್ಲದ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ತನ್ನದಲ್ಲದ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಹಾನಗಲ್ ಅನ್ನು ತನ್ನದಾಗಿಸಿಕೊಂಡಿತು. ಇನ್ನು ಜೆಡಿಎಸ್ ತನ್ನ ಹಿಡಿತದಲ್ಲಿದ್ದ ಸಿಂದಗಿಯನ್ನು ಬಿಜೆಪಿ ತೆಕ್ಕೆಗೆ ಬಿಟ್ಟು ಹೀನಾಯ ಸೋಲು ಕಂಡಿತು. ಕಳೆದ ವಿಧಾನಸಭಾ ಚುನಾವಣೆ ನಂತರ ನಡೆದ ಉಪಚುನಾವಣೆ ಯಲ್ಲಿ ಜೆಡಿಎಸ್ ಪ್ರತಿನಿಧಿಗಳಿದ್ದ ಐದು ಕ್ಷೇತ್ರಗಳಿಗೆ ಕಾರಣಾಂತರಗಳಿAದ ನಡೆದ ಉಪಚುನಾವಣೆಯಲ್ಲಿ ಆ ಪಕ್ಷ ಒಂದನ್ನೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.